ವೈದ್ಯರು ಸರ್ಕಾರಿ ಸೇವೆಗೆ ಆದ್ಯತೆ ಕೊಡಲಿ : ಬಿ.ಸಿ.ಪಾಟೀಲ್
ಕೊಪ್ಪಳ, ಮೇ18, ವೈದ್ಯಕೀಯ ಶಿಕ್ಷಣ ಪಡೆದ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆದ್ಯತೆ ನೀಡಲಿ ಎಂದು ಕೃಷಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಗತಿಪರಿಶೀಲನಾ ಸಭೆಗೂ ಮುನ್ನ ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಅಷ್ಟೇ ಅಲ್ಲದೇ ರಾಜ್ಯದ ಬಹುತೇಕ ಕಡೆ ಸರ್ಕಾರಿ ವೈದ್ಯರ ಕೊರತೆಯಿದೆ.ಇದಕ್ಕೆ ವೈದ್ಯರು ಖಾಸಗಿ ಸೇವೆಯತ್ತ ಹೆಚ್ಚು ಆಸಕ್ತಿ ತೋರುತ್ತಿರುವುದೇ ಕಾರಣ ಎಂದರು. ವೈದ್ಯರು ಸರ್ಕಾರಿ ಸೇವೆಗೆ ಹೆಚ್ಚಿನ ಆದ್ಯತೆ ಕೊಡಲಿ.ಇದರಿಂದ ಗ್ರಾಮೀಣ ಜನರಲ್ಲಿಯೂ ಸರ್ಕಾರಿ ವೈದ್ಯರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಲು ಸಹಕಾರಿಯಾಗಲಿದೆ ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದೆ ಎಂದರು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ತಾವು ಕಳೆದ ತಿಂಗಳು ಕೋವಿಡ್-19 ಲಾಕ್ಡೌನ್ನಿಂದ ರೈತರು ಮತ್ತು ಕೃಷಿ ಚಟುವಟಿಕೆಗಳ ಸ್ಥಿತಿಗತಿ ಬಗ್ಗೆ ಅರಿಯಲು ಭೇಟಿ ನೀಡಿ ಸಭೆ ನಡೆಸಲಾಗಿತ್ತು.ಈಗ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವುದಾಗಿ ಸಚಿವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 