ಕೌಟುಂಬಿಕ ಕಲಹ: ಪತ್ನಿಯನ್ನು ಹತ್ಯೆಗೈದು ಪತಿ ಆತ್ಮಹತ್ಯೆ
Domestic dispute: Husband kills wife, commits suicide
ಕೊಲ್ಹಾರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದ ಪರಿಣಾಮ ಪತಿಯೊಬ್ಬರು ಪತ್ನಿಗೆ ಕತ್ತರಿಯಿಂದ ಹಲ್ಲೆ ಮಾಡಿ ಹತ್ಯೆಗೈದು, ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಮೃತರನ್ನು ನಜೀರ್ ಬಾಬುಸಾಬ್ ನದಾಫ್ (35) ಹಾಗೂ ಅವರ ಪತ್ನಿ ಆಸ್ಮಾ ನಜೀರ್ ನದಾಫ್ (30) ಎಂದು ಗುರುತಿಸಲಾಗಿದೆ.
ಪತಿ–ಪತ್ನಿ ನಡುವೆ ನಡೆದ ಜಗಳ ತೀವ್ರಗೊಂಡ ಸಂದರ್ಭದಲ್ಲಿ ನಜೀರ್ ಅವರು ಕೈಗೆ ಸಿಕ್ಕ ಕತ್ತರಿಯಿಂದ ಆಸ್ಮಾ ಅವರಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಸ್ಮಾ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದಾದ ಬಳಿಕ ನಜೀರ್ ಅವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 