ಮುಂದಿನ ಸಿಎಂ ಯಾರೆಂದು ಗೊತ್ತಿಲ್ಲ:ಸಚಿವ ಆರ್.ಅಶೋಕ್
ಬೆಂಗಳೂರು,ಜು.23 ಮುಂದಿನ ಸಿಎಂ ಯಾರಾಗುತ್ತಾರೆ ಎನ್ನುವುದು ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದು, ಕೇಂದ್ರದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ.ಈ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದು, ನಾಯಕರು ಹೇಳಿದಂತೆ ಯಡಿಯೂರಪ್ಪ ಕೇಳುತ್ತಾರೆ.ಜುಲೈ 25ಕ್ಕೆ ಕೇಂದ್ರದಿಂದ ಸಂದೇಶ ಬರಲಿದೆ ಎಂದು ಸಿಎಂ ಹೇಳಿದ್ದಾರೆ.ಯಾವ ಸಚಿವರು,ಶಾಸಕರು ಕೆಲಸ ಮಾಡುತ್ತಿದ್ದಾರೆ ಎನ್ನುವುದೆಲ್ಲ ವರಿಷ್ಠರಿಗೆ ಗೊತ್ತಿದೆ ಎಂದು ಆರ್. ಅಶೋಕ್ ತಿಳಿಸಿದರು.