ಚಿಕ್ಕೋಡಿ

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ : ಪ್ರಭಾಕರ್ ಕೋರೆ

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ : ಪ್ರಭಾಕರ್ ಕೋರೆ

ಲೋಕದರ್ಶನ ವರದಿ

ಮಾಂಜರಿ  19: ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಲ್ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ  ಹೇಳಿದರು. 

   ಅವರು ಇಂದು ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಇತ್ತೀಚೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ  ಮಾತನಾಡಿದ ಅವರು, ಗ್ರಾಮೀಣ ಭಾಗದ ಶಾಲೆಗಳಲ್ಲಿ ಇಂಗ್ಲೀಷ ಮಾತನಾಡುವುದೇ ಸಾಧ್ಯನೆಯಾಗುತ್ತಿತು. ಆದರೆ ಇವತ್ತಿನ ದಿನಮಾನಗಳಲ್ಲಿ ಗ್ರಾಮೀಣ ಭಾಗದ ಪ್ರತಿಯೊಬ್ಬರು ಇಂಗ್ಲೀಷ ಭಾಷೆಯನ್ನು ಕಲಿತಿರುವುದು ಇಡೀ ದೇಶಕ್ಕೆ ಹೆಮ್ಮಯ ಸಂಗತಿಯಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕಲಿಸಿ ಶಿಕ್ಷಣವನ್ನು ಉಳಿಸಿ ಎಂದು ಹೇಳಿದರು. 

  ಸಮಾಜ ನಮಗಾಗಿ ಏನು ಕೊಟ್ಟಿದೆ ಎನ್ನವುದಕ್ಕಿಂತ ಸಮಾಜಕ್ಕಾಗಿ ನಾವು-ನೀವು ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ಗ್ರಾಮೀಣ ಭಾಗದ ಮಕ್ಕಳು ಐಎಎಸ್, ಕೆಎಎಸ್ನಂತಹ ಪರೀಕ್ಷೆಗಳಲ್ಲಿ ಪಾಸಾಗಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಸಮಾಜವೂ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಅಭಿವೃದ್ಧಪತದತ್ತ ಸಾಗಬೇಕಾದರೆ ಶಿಕ್ಷಣ ಬೇಕೆ ಬೇಕು. ಪ್ರತಿಯೊಬ್ಬರು ಒಗ್ಗಟ್ಟಾಗಿ ಒಂದಾಗಿ ಮಕ್ಕಳ ಶಿಕ್ಷಣದ ಅಭಿವೃದ್ಧಿಗೋಸ್ಕರವಾಗಿ ಶ್ರಮಿಸೋಣ ಎಂದರು. 

   ಈ ವೇಳೆ ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ 13 ವಿದ್ಯಾರ್ಥಿಗಳಿಗೆ ಪ್ರಭಾಕರ್ ಕೋರೆಯವರು ಸನ್ಮಾನಿಸಿದರು ಈ ಕಾರ್ಯಕ್ರಮಕ್ಕೆ ಬಿ ಎ ಪಾಟೀಲ್, ಸತ್ಯಪ್ಪ ಬಿಷ್ಟಿ, ಬಾಲಚಂದ್ರ ದತ್ವಾಡೆ, ಕಲ್ಲಪ್ಪ ನಿಂಗನೂರು, ಚಿದಾನಂದ ಕೋರೆ, ಸಹಕಾರಿ ಸಕ್ಕರೆ ಕಾರ್ಖಾ ನೆಯ ನಿರ್ದೇ ಶಕ ಮಲ್ಲಪ್ಪ ಮೈಶಾಲೆ, ಸದಾಶಿವ್ ನಿಪ್ಪಾಣಿ ಹಾಗೂ ಇನ್ನುಳಿದ ಗಣ್ಯ ನಾಗರಿಕರು ಪಾಲಕರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಜರಿದ್ದರು ಶಾಲೆಯ ಪ್ರಧಾನ ಗುರುಗಳಾದ ಮಲ್ಲಿಕಾರ್ಜುನ್ ನಿಗದಿ ಇವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.


 

ಸುದ್ದಿ ಓದಿ