ಬಳ್ಳಾರಿ

ಹಾಸನದ ಲೈಂಗಿಕ ಹಗರಣ ರಾಜಕೀಯಗೊಳಿಸದೆ ಸಂತ್ರಸ್ತ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸಿ- ಈಶ್ವರಿ ಕೆ.ಎಂ

ಹಾಸನದ ಲೈಂಗಿಕ ಹಗರಣ ರಾಜಕೀಯಗೊಳಿಸದೆ ಸಂತ್ರಸ್ತ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸಿ- ಈಶ್ವರಿ ಕೆ.ಎಂ

ಬಳ್ಳಾರಿ 08:ಇಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಹಾಸನದ ಲೈಂಗಿಕ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಎಐಎಂಎಸ್‌ಎಸ್‌ನ ಜಿಲ್ಲಾಧ್ಯಕ್ಷರಾದ ಈಶ್ವರಿ ಮಾತನಾಡುತ್ತಾ"ಹಾಸನದಲ್ಲಿ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯರು ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಬಗ್ಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಂಋಖಖ)ಯು ತೀವ್ರ ಆಘಾತ ಮತ್ತು ಆಕ್ರೋಶವನ್ನು ವ್ಯಕ್ತಪಡಿಸುತ್ತದೆ. ಹೆಣ್ಣುಮಕ್ಕಳ ಮೇಲೆ ಎಸಗಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಸರಣಿ ದೃಶ್ಯಾವಳಿಗಳಿರುವ ಅಶ್ಲೀಲ ಪೆನ್ ಡ್ರೈವ್‌ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ ಎನ್ನುವ ಆಘಾತಕಾರಿ ಸಂಗತಿಯು ಇಡಿ ರಾಜ್ಯದಲ್ಲೇ ತಲ್ಲಣ ಉಂಟು ಮಾಡಿದೆ. ಮನೆ ಕೆಲಸದ ಮಹಿಳೆಯಿಂದ ಹಿಡಿದು ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಉನ್ನತ ಹುದ್ದೆಯಲ್ಲಿರುವ ಮಹಿಳಾ ಅಧಿಕಾರಿಗಳು ಕೂಡ ಈ ಲೈಂಗಿಕ ದೌರ್ಜನ್ಯದ ಬಲಿಪಶುಗಳು ಎಂಬುದು ಇನ್ನೂ ಆಘಾತಕಾರಿ ವಿಷಯ. ಈಗ ಕೆಲವು ಸಂತ್ರಸ್ತ ಹೆಣ್ಣುಮಕ್ಕಳು ಬಂದು ತಮ್ಮ ಮೇಲಾದ ದೌರ್ಜನ್ಯದ ಕುರಿತು ದೂರು ದಾಖಲಿಸುತ್ತಿದ್ದಾರೆ. ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಕಾ ತಂಡ(ಖಋ)ವನ್ನು ರಚಿಸಿದೆ. ಆದರೆ ಇದು ಇಷ್ಟಕ್ಕೆ ನಿಲ್ಲಬಾರದು ಮತ್ತು ಯಾವುದೇ ರಾಜಕೀಯ ಹಿತಾಸಕ್ತಿಗೆ ಬಳಕೆಯಾಗಬಾರದು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಎಷ್ಟೇ ಪ್ರಭಾವಿತರಾಗಿದ್ದರು ರಾಜ್ಯ ಸರ್ಕಾರವುಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ  ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು, ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಹೆಣ್ಣುಮಕ್ಕಳಿಗೆ ಭದ್ರತೆ ಮತ್ತು ನ್ಯಾಯ ಒದಗಿಸಬೇಕು, ಈ ಪೆನ್‌ಡ್ರೈವ್‌ಗಳನ್ನು ಹಾದೀಬೀದಿಗಳಲ್ಲಿ ಹರಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ವಿಜಯಲಕ್ಷ್ಮಿ,ಪದ್ಮಾ,ನಾಗಮ್ಮ, ಗುಂಡಮ್ಮ, ವಿದ್ಯಾ, ಕೆ. ಬಸಮ್ಮ, ಕಲ್ಯಾಣಮ್ಮ, ಹನುಮಂತಮ್ಮ ,ಅನ್ನಪೂರ್ಣ, ಮತ್ತಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ