ಡಯಾಬಿಟಿಸ್ ಬಗ್ಗೆ ಅನಗತ್ಯ ಭಯ ಬೇಡ: ಡಾ. ಸಂದೀಪ್
Don't be unnecessarily afraid of diabetes: Dr. Sandeep
ಬೆಳಗಾವಿ 15 : ಡಯಾಬಿಟಿಸ್ ಅಷ್ಟು ಮಾರಕ ಕಾಯಿಲೆಯಲ್ಲ. ಸಮಯಕ್ಕೆ ಸರಿಯಾಗಿ ವೈದ್ಯರ ಸಲಹೆ ಪಡೆದು ಸೂಕ್ತ ಚಿಕಿತ್ಸೆ ಪಡೆದರೆ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ಹಿರಿಯ ಮಧುಮೇಹ ತಜ್ಞ ಡಾ. ಸಂದೀಪ್ ಶ್ರೀವಾಸ್ತವ ಹೇಳಿದರು.ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಮೆಡ್ ಬೆಲ್ ಗ್ಲೋಬಲ್ ಹೆಲ್ತ್ ಕೇರ್ ಮತ್ತು ಸಂಶೋದನೆ ಪೌಂಡೇಶನ್ ವತಿಯಿಂದ ಆಯೋಜಿಸಲಾದ ಎರಡು ದಿನದ ಮಧುಮೇಹ ( ಜಚಿಛಜಣ) ಜಾಗೃತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು,ಮಧುಮೇಹ ರೋಗಿಗಳು ರೋಗದ ಬಗ್ಗೆ ಅನಗತ್ಯ ಭಯ ಮತ್ತು ಆತಂಕಕ್ಕೆ ಒಳಗಾಗಬಾರದು.
ಧೈರ್ಯ ಮತ್ತು ಸ್ಥೈರ್ಯದಿಂದ ಆರೋಗ್ಯದ ಕಡೆ ಗಮನ ಹರಿಸಿದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ನಿಯಮಿತ ವ್ಯಾಯಾಮ, ಗುಣಮಟ್ಟದ ಆಹಾರ ಸೇವನೆ ಹಾಗೂ ಆರೋಗ್ಯಕರ ಜೀವನಶೈಲಿಯ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದು ಎಂದ ಅವರು, ಬೆಳಗಾವಿಯಲ್ಲಿ ಬೃಹತ್ ಮಧುಮೇಹ ಜಾಗೃತ ಕಾರ್ಯಕ್ರಮವನ್ನು ಆಯೋಜಿಸಿದ ಮೆಡ್ ಬೆಲ್ ಗ್ಲೋಬಲ್ ಸಂಸ್ಥೆ ಬಗ್ಗೆ ಅಪಾರ ಮೆಚ್ಚುಗೆ ತಿಳಿಸಿದರು. ತಂತ್ರಜ್ಞಾನದ ಅಭಿವೃದ್ಧಿಯಿಂದ ಇಂದು ಮಧುಮೇಹ ಸೇರಿದಂತೆ ಅನೇಕ ಕಾಯಿಲೆಗಳಿಗೆ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿವೆ. ಆದ್ದರಿಂದ ರೋಗವನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ತಪಾಸಣೆ ಮಾಡಿಸಿಕೊಳ್ಳುವುದು ಹಾಗೂ ವೈದ್ಯರ ಸಲಹೆ ಪಾಲಿಸುವುದು ಅಗತ್ಯ ಎಂದು ಹೇಳಿದರು.ಇಂದಿನ ಜೀವನಶೈಲಿ, ಒತ್ತಡ ಹಾಗೂ ಅನಿಯಮಿತ ಆಹಾರ ಪದ್ಧತಿಯಿಂದ ಮಧುಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ.
ಕೆಲಸದ ಜತೆ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುನ್ನೆಚ್ಚರಿಕೆ ಮತ್ತು ಜಾಗೃತಿ ಅತ್ಯಂತ ಮುಖ್ಯ ಎಂದು ಅವರು ಅಭಿಪ್ರಾಯಪಟ್ಟರು.ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ಮಧುಮೇಹ ನಿಯಂತ್ರಣದಲ್ಲಿ ಇಡಲು ಜಾಗೃತಿ, ನಿಯಮಿತ ವ್ಯಾಯಾಮ, ಸಮತೋಲನ ಆಹಾರ ಹಾಗೂ ವೈದ್ಯರ ಸಲಹೆ ಅತ್ಯಂತ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರಂಭಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ಅವರು ತಿಳಿಸಿದರು. ಮೆಡ್ ಬೆಲ್ ಗ್ಲೋಬಲ್ ಸಂಸ್ಥೆಯ ಅಧ್ಯಕ್ಷರಾದ, ಖ್ಯಾತ ವೈದ್ಯರಾದ ಡಾ. ಗೀರಿಶ ಸೋನವಾಲಕರ್ ಅವರು ಮಾತನಾಡಿ,
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 