ಮೋದಿ ಮಹಾನ್ ನಾಯಕ, ವಿಶ್ವಾಸಾರ್ಹ ಮಿತ್ರ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಸೆಪ್ಟೆಂಬರ್ 18: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಗುರುವಾರ ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಈ ಹಿನ್ನೆಲೆಯಲ್ಲಿ ಜಾಗತಿಕ ನಾಯಕರು ಭಾರತ ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರೂ ಕೂಡಾ ಮೋದಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ. ಮಹಾನ್ ನಾಯಕ, ವಿಶ್ವಾಸಾರ್ಹ ಮಿತ್ರ ಮೋದಿಗೆ ಜನ್ಮದಿನದ ಶುಭಾಶಯಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಫೆಬ್ರವರಿಯಲ್ಲಿ ತಮ್ಮ ಭಾರತ ಭೇಟಿಯ ಸಂದರ್ಭದಲ್ಲಿ ಅಹಮದಾಬಾದ್ ದ ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದ ಫೋಟೋವನ್ನೂ ಟ್ರಂಪ್ ತಮ್ಮ ಶುಭಾಶಯ ಟ್ವೀಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದವರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಸೇರಿದ್ದಾರೆ.