ಬಳ್ಳಾರಿ

ಬಳ್ಳಾರಿ ಜಿಲ್ಲೆಯಲ್ಲಿ ಮನೆ-ಮನೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಮೂನೆ ವಿತರಣೆ: ಶೇ. 85.56 ರಷ್ಟು ಪ್ರಗತಿ

ಬಳ್ಳಾರಿ ಜಿಲ್ಲೆಯಲ್ಲಿ ಮನೆ-ಮನೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಮೂನೆ ವಿತರಣೆ: ಶೇ. 85.56 ರಷ್ಟು ಪ್ರಗತಿ

ಲೋಕದರ್ಶನ ವರದಿ 

  ಬಳ್ಳಾರಿ  08: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮತದಾರರಿಗೆ ಎಸ್‌ಐಆರ್ ಎನ್ಯುಮರೇಶನ್ ನಮೂನೆಗಳನ್ನು ತಲುಪಿಸಲು ಮನೆ-ಮನೆಗೆ ಭೇಟಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಶೇ.85.56 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ನಾಗೇಂದ್ರ ಪ್ರಸಾದ್‌.ಕೆ ಅವರು ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 12,29,586 ಮತದಾರರಿಗೆ ಈಗಾಗಲೇ ಅಗತ್ಯವಿರುವ ಗಣತಿ ನಮೂನೆಗಳನ್ನು ಮುದ್ರಿಸಿ ಬಿ.ಎಲ್‌.ಒ ಗಳಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಶೇ. 97.83 ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. 


ಸುದ್ದಿ ಓದಿ