ದೋಶಿಯವರು ಮಹಾದಾನಿ, ಅಜಾತಶತ್ರು: ಜಿಗಜಿಣಗಿ
ಇಂಡಿ27: ದೋಶಿಯವರು ಪಟ್ಟಣದ ಮಹಿಳಾ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯಕ್ಕೆ ದಾನ ನೀಡಿ ಅನೇಕ ಬಡ ವಿದ್ಯಾರ್ಥಿಗಳು ಓದಲು ಅನುಕೂಲ ಮಾಡಿಕೊಟ್ಟ ಮಹಾದಾನಿ ಮತ್ತು ಅಜಾತಶತ್ರುವಾಗಿದ್ದರು. ಅವರ ಆಡಳಿತ ಅವಧಿಯಲ್ಲಿ ಸಂಸ್ಥೆ ಎತ್ತರಕ್ಕೆ ಬೆಳೆದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಇಂಡಿ ಪಟ್ಟಣದ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಮಾಣಿಕಲಾಲ ದೋಶಿ ಗುರುವಾರ ನಿಧನರಾದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಶಾಂತೇಶ್ವರ ವಿದ್ಯಾವರ್ಧಕ ಸಂಘ, ಬಸವೇಶ್ವರ ವೃತ್ತ, ಗಾಂಧೀಜಿ ವೃತ್ತದಲ್ಲಿ ಶ್ರದ್ಧಾಂಜಲಿ ಅರ್ಿಸಲಾಯಿತು.
ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ, ಶ್ರೀಮಂತ ಬಾರಿಕಾಯಿ ಮಾತನಾಡಿದರು.
ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿ ನಡೆದ ಸಭೆಯಲ್ಲಿ ಆಡಳಿತ ಮಂಡಳಿಯ ಸಿದ್ದಪ್ಪ ತಾಂಬೆ, ಅಜೀತ ಧನಶೆಟ್ಟಿ, ಪ್ರಾಚಾರ್ಯ ರಾಘವೇಂದ್ರ ಕುಲಕರ್ಣಿ ಮಾತನಾಡಿದರು.
ಮಧ್ಯಾಹ್ನ ನಡೆದ ಅಂತಿಮ ಯಾತ್ರೆಯಲ್ಲಿ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ, ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ, ಬಿ.ಕೆ.ಮಸಳಿ, ಗೌರವಕಾರ್ಯದರ್ಶಿ ಪ್ರಭಾಕರ ಬಗಲಿ, ಲಯನ್ಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀಪತಿಗೌಡ ಬಿರಾದಾರ, ಆರ್.ಎಂ.ಶಹಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಆರ್.ಶಹಾ, ಸಾಹಿತಿ ಡಿ.ಎನ್.ಅಕ್ಕಿ, ಸಂಸ್ಥೆಯ ಆಡಳಿತ ಮಂಡಳಿ, ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರರು, ಮುಖ್ಯ ಗುರುಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.