ಇಂಡಿ

ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆ: ಪಾಟೀಲ

ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆ: ಪಾಟೀಲ

ಇಂಡಿ: ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹಿರಿಯ ವಿಜ್ಞಾನಿ ಪ್ರೇಮಾ ಪಾಟೀಲ ಹೇಳಿದರು. 

ಅವರು ಶನಿವಾರ ಪಟ್ಟಣದ ರೈಲು ನಿಲ್ದಾಣ ರಸ್ತೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಐಸಿಎಆರ್ ಅಡಿಯಲ್ಲಿ ಆಯೋಜಿಸಿದ  ಭಾರತೀಯ ಕೃಷಿ ಅನುಸಂಧಾನ ಪರಿಷತ,  ನವದೆಹಲಿಯ 94ನೇ ಸಂಸ್ಥಾಪನೆಯ ದಿನಾಚರಣೆಯ ಹಾಗೂ ರೈತರ ಆದಾಯ ದ್ವಿಗುಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಮುಖ್ಯ ಅತಿಥಿಯಾಗಿ ಮಣಂಕಲಗಿ ಗ್ರಾಮದ ಪ್ರಗತಿಪರ ರೈತ ಎಸ್‌.ಟಿ. ಕೋಳಿ ಮಾತನಾಡಿ, ಅನ್ನದಾತ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಸರಕಾರ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರಕಾರ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ ಕಿಸಾನ್ ರೈಲು ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ರೈತರಿಗೆ ಜಾರಿಗೊಳಿಸಬೇಕು ಎಂದರು. 

ರೈತ ಈರಣ್ಣ ಕುದರಿ ಮಾತನಾಡಿ, ಹಳೇ ಕೃಷಿ ಪದ್ಧತಿಗೆ ಜೋತು ಬೀಳದೆ ರೈತರು ಭೂಮಿಯ ಹಿತ ಕಾಯುವ ಮತ್ತು ಆದಾಯ ದ್ವಿಗುಣಗೊಳಿಸುವ ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು ಎಂದು ರೈತರಿಗೆ ತಿಳಿಸಿದರು. 

ಕಾರ‌್ಯಕ್ರಮದಲ್ಲಿ ರಾಘವೇಂದ್ರ ಕೊಡಹೊನ್ನ, ಡಾ. ಸವಿತಾ ಬಿ, ಅರ್ಜುನ ಸೂಲಗಿತ್ತಿ, ಮಜೀದ ಜಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು. 


ಸುದ್ದಿ ಓದಿ