ಡಾ. ಅಂಬೇಡ್ಕರ್, ಡಾ. ಜಗಜೀವನ್ ರಾಮ್ ಜಯಂತ್ಯೋತ್ಸವ
ಲೋಕದರ್ಶನ ವರದಿ
ರಾಣೀಬೆನ್ನೂರ 17: ತಾಲೂಕಿನ ಹನುಮನಮಟ್ಟಿ ಕೃಷಿ ವಿಶ್ವವಿದ್ಯಾಲಯ ಸಭಾಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 131 ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 115 ನೇ ಜಯಂತ್ಯೋತ್ಸವ ಸಮಾರಂಭವು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸ್ಥಳೀಯ ಆರ್.ಟಿ.ಇಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾಸರಸ್ವತಿ ಬಮ್ಮನಾಳ ಅವರು, ಶಿಕ್ಷಣ ಹಾಗೂ ಯುವ ಜನತೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಭಿಪ್ರಾಯಗಳು ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ. ಚಿದಾನಂದ ಮನ್ಸೂರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕಿ ಡಾ. ಸರಸ್ವತಿ ಬಮ್ಮನಾಳ ಅವರನ್ನು ವಿದ್ಯಾಲಯದ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ನೂರಾರು ವಿದ್ಯಾರ್ಥಿಗಳು, ಸಹಾಯಕ ಪ್ರಾಧ್ಯಾಪಕರು ಸಿಬ್ಬಂದಿ ಉಪಸ್ಥಿತರಿದ್ದರು.