ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನಕ್ಕೆ ನೀಡಿದ ಕೊಡುಗೆ ಅಪಾರ: ಐ.ಎಸ್.ಪಾಟೀಲ
ರೋಣ 15: ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನಕ್ಕೆ ನೀಡಿದ ಕೊಡುಗೆ ಅಪಾರ. ಸಂವಿಧಾನವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ದೇಶಕ್ಕೆ ಸಮಾನತೆಯ ಹಕ್ಕು ಸಿಗಲು ಡಾ.ಬಿ.ಆರ್.ಅಂಬೇಡ್ಕರ್ ಹಗಲಿರುಳು ಶ್ರಮಿಸಿದ್ದಾರೆ ಎಂದು ಕೆ.ಸಿ.ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್.ಪಾಟೀಲ ಹೇಳಿದರು.
ಪಟ್ಟಣದ ಐ.ಎಸ್.ಪಾಟೀಲ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾರತ ಸಂವಿಧಾನದ ಪೀಠಿಕೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಮಿಥುನ್ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಬಿ ಹರ್ತಿ, ತಹಶೀಲ್ದಾರ ವಾಣಿ ಉಂಕಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರವಿ ಎ.ಎನ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್.ಹುರಳಿ, ಪ್ರಕಾಶ ಹೊಸಳ್ಳಿ, ಮಂಜುನಾಥ ಬುರಡಿ, ಬಸವಂತಪ್ಪ ಎಚ್ ತಳವಾರ,ಶರಣಪ್ಪ ದೊಡ್ಡಮನಿ, ಮೌನೇಶ ಹಾದಿಮನಿ, ವಿ.ಬಿ.ಸೋಮನಕಟ್ಟಿಮಠ, ಬಾವಾಸಾಬ ಬೇಟಗೇರಿ, ವಿದ್ಯಾ ದೊಡ್ಡಮನಿ,ಸಂಜಯ್ ದೊಡ್ಡಮನಿ, ಎಸ್ ಕೆ ನಡುವಿನಮನಿ, ಹನುಮಂತ ಪುಜಾರ, ಬಸವರಾಜ ತಳವಾರ, ಬಸಪ್ಪ ಹೊಸಮನಿ, ಸಂತೋಷ ಕಡಿವಾಲ ಸೇರಿದಂತೆ ಸಮಾಜದ ಮುಖಂಡರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.