ಡಾ.ಬಿ.ಆರ್‌. ಅಂಬೇಡ್ಕರ ಭವನದಲ್ಲಿ ಏ 05 ರಂದು ಡಾಽಽ ಬಾಬು. ಜಗಜೀವನ ರಾಂ ಅವರ ಜಯಂತಿ

ಡಾ.ಬಿ.ಆರ್‌. ಅಂಬೇಡ್ಕರ ಭವನದಲ್ಲಿ ಏ 05 ರಂದು ಡಾಽಽ ಬಾಬು. ಜಗಜೀವನ ರಾಂ ಅವರ ಜಯಂತಿ  Dr. B. R. Ambedkar Bhavan on April 05 to celebrate the birth anniversary of Dr. Babu Jagjivan Ram

ಧಾರವಾಡ 31 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾಽಽ ಬಾಬು. ಜಗಜೀವನ ರಾಂ ಅವರ 119 ನೇ ಜಯಂತಿ  ಕಾರ್ಯಕ್ರಮವನ್ನು ಏಪ್ರಿಲ್ 05, 2026 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಸನ್ಮತಿ ಮಾರ್ಗದಲ್ಲಿರುವ ಡಾ. ಬಿ. ಆರ್‌. ಅಂಬೇಡ್ಕರ ಭವನದಲ್ಲಿ ಆಯೋಜಿಸಲಾಗಿದೆ.  

ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನವಾಡ ಅಲ್ಲಮಪ್ರಭುಗಳ ಆಶ್ರಮದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ದಿವ್ಯ ಸಾನಿಧ್ಯ  ವಹಿಸುವರು.  ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. 

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್‌. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ತಿ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‌ಪೀರ್‌.ಎಸ್‌.ಖಾದ್ರಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮತ ಅಧ್ಯಕ್ಷ ನಾಗೇಂದ್ರ ಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. 

 ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್‌.ಎಚ್‌.ಕೋನರಡ್ಡಿ, ಎಸ್‌.ವ್ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್‌.ಪಾಟೀಲ, ಎಫ್‌.ಹೆಚ್‌.ಜಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಗಿರೆಪ್ಪಾ ಇಟಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ  ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌. ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ ಅವರು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಬೆಂಗಳೂರು ಜಲಮಂಡಳಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ. ಎಂ ಅವರು ಭಾಗವಹಿಸುವರು. 

 ತುಮಕೂರು ರಾಜ್ಯ ಶಾಸ್ತ್ರ ಉಪನ್ಯಾಸಕ ಹಾಗೂ ವಕೀಲ ರಂಗಧಮಯ್ಯ ಜೆಸಿ ಜನಕಲೋಟಿ ಅವರು ಪ್ರಧಾನ ಸಂಭಾಷಣಾಕರಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ. ಎಸ್‌.ಘಾಳಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಜಗದೀಶ ಹೆಬ್ಬಳ್ಳಿ, ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಪಕ ಆರ್‌.ಹೆಚ್‌. ನಾಯ್ಕರ್ ಅವರು ಭಾಗವಹಿಸುವರೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.