ಡಾ.ಬಿ ಆರ್ ಅಂಬೇಡ್ಕರ ಜಯಂತಿ: ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ
ಲೋಕದರ್ಶನ ವರದಿ
ಕೊಪ್ಪಳ ಏಪ್ರಿಲ್ 14 : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ ಎಲ್ ಅರಸಿದ್ಧಿ, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ ಅವರು ಏಪ್ರೀಲ್ 14ರ ಬೆಳಗ್ಗೆ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನ ವನಕ್ಕೆ ಆಗಮಿಸಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜದ ಗಣ್ಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 