ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣ: ಗೊಂದಿ
ಯಲಬುರ್ಗಾ 25: ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ದ್ಯಾಮಣ್ಣ ಗೊಂದಿ ಹೇಳಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಸಸಿಗೆ ನೀರು ಉನಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು ನಮಗೆಲ್ಲಾ ಸ್ಫೂರ್ತಿಯಾಗಿದ್ದು ಅವರನ್ನು ಸಮಗ್ರವಾಗಿ ಅರಿಯುವ ಕಾವ್ಯವನ್ನು ನಮ್ಮ ಕನ್ನಡ ಸಂಸ್ಕೃತಿ ಇಲಾಖೆ ಮಾಡುತ್ತಿದೆ ಅದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಯಶಸ್ವಿಯಾಗಿ” ಹಾಗೂ ಅವರು ನೀಡಿದ ಸಮಾನತೆಯ ತತ್ವಗಳು ಇಂದು ಎಲ್ಲಾ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಅವರನ್ನು ಎಲ್ಲರೂ ಅರಿತುಕೊಳ್ಳುವ ಒಂದು ಸುಕಾರ್ಯವೇ ಈ ಅಂಬೇಡ್ಕರ್ ಓದು ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದರು
ಪ್ರಾಂಶುಪಾಲ ಡಾ. ಶಿವರಾಜ ಗುರಿಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ನಮ್ಮ ದೇಶಕ್ಕೆ ಒಂದು ದೊಡ್ಡ ಶಕ್ತಿಯಾಗಿದ್ದು ಅವರನ್ನು ಅರಿತುಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಕಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಹೇಳಿದರು
ಕಾರ್ಯಕ್ರಮದ ಅಂಗವಾಗಿ ನಡೆದ ರಸಪ್ರಶ್ನೆ, ಆಶುಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಜೇತ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬಹುಮಾನಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಉಪನ್ಯಾಸಕ ವಾಯ್.ಬಿ.ಅಂಗಡಿ, ಎ.ಬಿ.ಕೆಂಚ್ಚರೆಡ್ಡಿ, ವೀರೇಶ ಗಜೇಂದ್ರಗಡ, ಪ್ರಭು ಕಲ್ಲೂರು, ನಾಗರಾಜ ಲಗಳೂರು, ಹುಚ್ಚಪ್ಪ ಬೋಮ್ಮನಾಳ, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಇದ್ದರು.