ಕುಷ್ಟಗಿ

14ರಂದು ಡಾ. ಬಿ.ಆರ್ ಅಂಬೇಡ್ಕರ್ 131ನೇ ಜನ್ಮ ದಿನಾಚರಣೆ

14ರಂದು ಡಾ. ಬಿ.ಆರ್ ಅಂಬೇಡ್ಕರ್ 131ನೇ ಜನ್ಮ ದಿನಾಚರಣೆ

ಕುಷ್ಟಗಿ 11: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ಗುರುವಾರ ಬೆಳಗ್ಗೆ 11 ಗಂಟೆಗೆ ಇಲ್ಲಿನ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಏರಿ​‍್ಡಸಲಾಗಿದೆ ಎಂದು ತಹಶೀಲ್ದಾರ ಹಾಗೂ ಜಯಂತೋತ್ಸವ ಸಮಿತಿ ಅಧ್ಯಕ್ಷ ಎಂ ಸಿದ್ದೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸುವರು.  

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಘನ ಉಪಸ್ಥಿತಿ ವಹಿಸುವರು.  

ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ವಿಧಾನಪರಿಷತ್ ಸದಸ್ಯ ಶಶಿಲ್ ನಮೋಶಿ, ಶರಣಗೌಡ ಪಾಟೀಲ್ ಬಯ್ಯಾಪುರ, ಡಾ. ಚಂದ್ರಶೇಖರ ಪಾಟೀಲ್, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಕುರಿ ಮತ್ತು ಉಣ್ಣೆ ನಿಗಮ ಅಧ್ಯಕ್ಷ ಶರಣು ತಳ್ಳಿಕೇರಿ, ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  

ಪಿಆರ್‌ಪಿಬಿಆರ್‌ಸಿ  ಶರಣಪ್ಪ ತೆಮ್ಮಿನಾಳ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ ತಿಳಿಸಿದ್ದಾರೆ. 


ಸುದ್ದಿ ಓದಿ