ಪ್ರಧಾನ ಅಂಚೆ ಕಚೇರಿಯಲ್ಲಿಡಾ.ಬಿ.ಆರ್.ಅಂಬೇಡ್ಕರ್ 135 ನೇ ಜಯಂತಿ ಆಚರಣೆ
Dr. BR Ambedkar 135th Jayanti Celebration at Head Post Office
ಗದಗ 14 : ಗದಗ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ಮನರಂಜನಾ ಕೂಟದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ 14ರಂದು ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಸಾಮೂಹಿಕವಾಗಿ ಪುಷ್ಪಾರ್ಚನೆ ಸಲ್ಲಿಸಿದರು.ಬಳಿಕ ಡಾ.ಅಂಬೇಡ್ಕರ್ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಕಾರ್ಯಕ್ರಮವನ್ನು ಎಸ್.ವಿ.ಹಿರೇಮಠ, ಪೋತರಾಜ ಸಾಕಿ ಅವರು ಪ್ರಸ್ತುತಪಡಿಸಿದರು.
ಅಂಚೆ ನೀರೀಕ್ಷಕ ನಾಗರಾಜ ಮಳ್ಳಿ, ಪ್ರಧಾನ ಅಂಚೆ ಪಾಲಕ ಡಿ.ಜಿ.ಮ್ಯಾಗೇರಿ, ವಿ.ಎಂ.ಅಂಗಡಿ, ಮಂಜುನಾಥ ಕುರಿಯವರ, ಮಂಜುನಾಥ ಪಾಮೇನಹಳ್ಳಿ, ಮನೋಹರ ಕಡಿಯವರ, ವೆಂಕಟೇಶ ಆಕಳವಾಡಿ, ಶರಣಪ್ಪ ಬೇನಾಳ, ಸಿದ್ಧಲಿಂಗೇಶ ಯಂಡಿಗೇರಿ, ಉಮೇಶ ಸಂದಿಮನಿ, ಲಕ್ಷ್ಮೀ ಮಾದರ, ಶಿವಯ್ಯ ಮತ್ತಿತರರು ಪಾಲ್ಗೊಂಡಿದ್ದರು.****
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 