ಡಾ. ಬಾಬು ಜಗಜೀವನ್ರಾಮ ಜಯಂತಿ ಕಾರ್ಯಕ್ರಮ
ಶಿಗ್ಗಾವಿ 06: ಸಮಾಜಗಳ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನರಾಮರವರ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದು ತಹಶೀಲ್ದಾರ ಸಂತೋಷ ಹಿರೇಮಠ ಹೇಳಿದರು.
ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಆಡಳಿತ ಸಂಕೀರ್ಣಗಳ ಭವನದಲ್ಲಿ ನಡೆದ ಡಾ. ಬಾಬು ಜಗಜೀವನ್ರಾಮರವರ 117ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಮಹಾನ್ ನಾಯಕರ ಸಾಮಾಜಿಕ ಕಳಕಳಿಯ ಮಾರ್ಗ ಎಲ್ಲರಿಗೂ ಮಾರ್ಗದರ್ಶಿ ಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ, ಅಶೋಕ ಕಾಳೆ, ಬಸವರಾಜ ಕಟ್ಟಿಮನಿ, ಹನುಮಂತಪ್ಪ ಬಂಡಿವಡ್ಡರ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಗಳ ಸಿಬ್ಬಂದಿಗಳು ಇದ್ದರು.