ಜು.19ರಂದು ಡಾ. ಎಫ್.ಜಿ. ಹಳಕಟ್ಟಿ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಲೋಕದರ್ಶನ ವರದಿ
ಹುಬ್ಬಳ್ಳಿ 17 : ಬಸವ ಕೇಂದ್ರದ ವತಿಯಿಂದ ಜುಲೈ 19, 2026ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತದಲ್ಲಿರುವ ವಿ.ಎಂ. ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ಖ್ಯಾತ ಸಂಶೋಧಕ, ಸಾಹಿತಿ, ವಕೀಲ ಹಾಗೂ ವಚನ ಸಾಹಿತ್ಯದ ಪಿತಾಮಹ ಡಾ. ಎಫ್.ಜಿ. ಹಳಕಟ್ಟಿ ಅವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಬಸವ ಸಂಸ್ಕೃತಿ ಶಾಲೆಯ ಶಿಕ್ಷಕಿ ನೇಹಾ ಕಾಂತ್ ಅವರು ಡಾ. ಎಫ್.ಜಿ. ಹಳಕಟ್ಟಿ ಅವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಲಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಮಲ್ಲಿಕಾರ್ಜುನ ಹನಮಸಾಗರ ಅವರು ಶರಣ ಹಡಪದ ಅಪ್ಪಣ್ಣ ಅವರ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ಬಸವ ಕೇಂದ್ರದ ಅಧ್ಯಕ್ಷ ಪ್ರೊ. ಜಿ.ಬಿ. ಹಳ್ಯಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ದಾಸೋಹಿಗಳಾದ ಸರ್ವಮಂಗಳಾ ಹಾಗೂ ಗಂಗಾಧರ ಅಣ್ಣಿಗೇರಿ ಉಪಸ್ಥಿತರಿರುವರು. ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.