ಡಾ. ಹೆಚ್.ಸಿ. ಮಹಾದೇವಪ್ಪಅವರಿಗೆ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡಲು ಒತ್ತಾಯ
Dr. H.C. Mahadevappa urged to be given a higher position in the government
ಲೋಕದರ್ಶನ ವರದಿ
ಸಿಂದಗಿ 09: ರಾಜ್ಯ ಸರ್ಕಾರದಲ್ಲಿ ಹಿರಿಯದಲಿತ ನಾಯಕರಾದ ಹೆಚ್.ಸಿ.ಮಹಾದೇವಪ್ಪ ಅವರಿಗೆ ಉನ್ನತ ಸ್ಥಾನಮಾನ ನೀಡಬೇಕ ಎಂದು ವಿವಿಧದಲಿತ ಸಂಘಟನೆಗಳು ಹಾಗೂ ಮುಖಂಡರು ಒತ್ತಾಯಿಸಿದ್ದಾರೆ. ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ. ಹೆಚ್.ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ರಾಜ್ಯದ ದಲಿತ ಸಮುದಾಯದ ಆಶೋತ್ತರಗಳಿಗೆ ಧ್ವನಿಯಾಗಿರುವ ಮಹಾದೇವಪ್ಪ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರ ನಾಯಕತ್ವ ಮತ್ತು ಆಡಳಿತ ಅನುಭವವನ್ನು ಪರಿಗಣಿಸಿ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವುದು ಸೂಕ್ತ. "ಸಾಮಾಜಿಕ ನ್ಯಾಯದ ಪರವಾಗಿ ನಿರಂತರ ಹೋರಾಟ ನಡೆಸಿರುವ ಡಾ. ಹೆಚ್.ಸಿ. ಮಹಾದೇವಪ್ಪ ಅವರಿಗೆ ಸರ್ಕಾರದಲ್ಲಿ ಇನ್ನಷ್ಟು ಮಹತ್ವದ ಜವಾಬ್ದಾರಿ ನೀಡಬೇಕು. ಇದರಿಂದ ದಲಿತ ಸಮುದಾಯದ ಆಶಯಗಳಿಗೆ ಹೆಚ್ಚಿನ ಬಲ ದೊರೆಯಲಿದೆ" ಎಂದು ದಲಿತ ಮುಖಂಡ ರಾಜಶೇಖರ ಕೂಚಬಾಳ ಮನವಿ ಮಾಡಿದ್ದಾರೆ.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 