ಹಸಿರು ಕ್ರಾಂತಿ ಹರಿಕಾರ ಡಾ. ಜಗಜೀವನರಾಮ್ ಜನ್ಮದಿನಾಚರಣೆ
ಕಾರವಾರ 05 : ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ರವರ 114ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸೊಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಬಾಬು ಜಗಜೀವನರಾಮ ಭಾವ ಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ರವರು ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕ ಎಸ್. ಪುರುಷೋತ್ತಮ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿಸದ್ದರು.