ರಾಜ್ಯಾಧ್ಯಕ್ಷರನ್ನಾಗಿ ಡಾ.ಮುಖ್ಯಮಂತ್ರಿ ಚಂದ್ರು ನೇಮಕ
ಬಳ್ಳಾರಿ 13: ಕರ್ನಾಟಕ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಡಾ.ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ.ಸಂದೀಪ್ ಪಾಟಕ್, ಆದೇಶಿಸಿರುತ್ತಾರೆ. ಬಳ್ಳಾರಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕ ಸ್ವಾಗಿತಿಸುತ್ತಾ, ಪಕ್ಷದ ಜಿಲ್ಲಾ ಪದಾಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿ ಹರ್ಷವ್ಯಕ್ತಪಡಿಸುತ್ತಿದ್ದೇವೆ.
ಮುಖ್ಯಮಂತ್ರಿ ಚಂದ್ರುರವರು ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಬೆಳಸಲು ದೇವರು ಅವರಿಗೆ ಶಕ್ತಿ ನೀಡಲಿ ಎಂದು ಆಶಿಸುತ್ತಾ ಅವರನ್ನು ಜಿಲ್ಲಾ ಘಟಕದ ವತಿಯಿಂದ ಅಭಿನಂದನೆಗಳನ್ನು ತಿಳಿಸುತ್ತಿದ್ದೇವೆ