ಡಾ. ನಾಗಲಕ್ಷ್ಮೀ ಚೌಧರಿ ಅವರ ಧಾರವಾಡ ಜಿಲ್ಲಾ ಪ್ರವಾಸ
Dr. Nagalakshmi Chaudhary's Dharwad district tour
ಲೋಕದರ್ಶನ ವರದಿ
ಧಾರವಾಡ 14: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮೇ 17, 18 ಮತ್ತು 19, 2026 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೇ. 17 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ಹಳೇ ಪಿ.ಬಿ.ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪದಲ್ಲಿ ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ಪ್ರಾಂತ್ಯ ಇವರು ಹಮ್ಮಿಕೊಂಡಿರುವ ಮಹಿಳಾ ಅಧಿವೇಶನ-2026 ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 12:30 ಗಂಟೆಗೆ ಹುಬ್ಬಳ್ಳಿ ತಾಲ್ಲೂಕಿನ ಅಯೋಧ್ಯ ಗ್ರಾಮದಲ್ಲಿ 161 ಗಿರಿಜನ ಮಹಿಳೆಯರಿಗೆ ಮಂಜೂರು ಆಗಿದ್ದ ಸ್ಥಳಕ್ಕೆ ಭೇಟಿ ನೀಡಿ, ಪರೀಶೀಲಿಸುವರು. ನಂತರ 3:30 ಗಂಟೆಗೆ ಧಾರವಾಡ ನಗರದ ಹಳೆ ಪಿ.ಬಿ.ರಸ್ತೆ ಹತ್ತಿರದಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಧಾರವಾಡ ಪೊಲೀಸ್ ಹೆಡ ಕ್ವಾರ್ಟಸ್‌ದಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡುವರು.
ಮೇ 18 ರಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡುವರು. ನಂತರ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯೋಜಿಸಿರುವ ಕಓಖಊ ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು.
ನಂತರ 12 ಗಂಟೆಗೆ ಧಾರವಾಡ ಕವಿವಿ ಆವರಣದಲ್ಲಿರುವ ಗಾಂಧಿಭವನದಲ್ಲಿ ಪಿ.ಜಿ ವಿದ್ಯಾರ್ಥಿನಿಯರು ಹಾಗೂ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸುವರು. ಸಂಜೆ 4 ಗಂಟೆಗೆ ಸವದತ್ತಿ ರಸ್ತೆಯಲ್ಲಿರುವ ಹಳೇ ಎ.ಪಿ.ಎಂ.ಸಿ ಹತ್ತಿರ ವಾಸಿಸುತ್ತಿರುವ ದುರ್ಗಮುರಗಿ, ಕೊರಗ ಮತ್ತು ಇತರೆ ಸಮುದಾಯದವರನ್ನು ಭೇಟಿ ಮಾಡುವರು. ಸಂಜೆ 6 ಗಂಟೆಗೆ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡುವರು.
ಮೇ 19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರೀಶೀಲನಾ ಸಭೆ ಜರುಗಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ನಂತರ ಅಂದು ಸಂಜೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 