ಬಳ್ಳಾರಿ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ನಾಗಪ್ಪ ಬಿ.ಈ
ಬಳ್ಳಾರಿ.21, ದಲಿತ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ಡಾ.ನಾಗಪ್ಪ ಬಿ.ಈ, ಅವರು ನೇಮಕಗೊಂಡಿದ್ದಾರೆ.
ಡಾ.ನಾಗಪ್ಪ ಬಿ.ಈ. ಇವರ ಕ್ರಿಯಾಶೀಲತೆ, ಸಾಮಾಜಿಕ ಕಳಕಳಿ ಸಂಘಟನಾ ಚಾತುರ್ಯ ಹಾಗೂ ಸಾಹಿತ್ಯ ಕೃಷಿಯನ್ನು ಗುರುತಿಸಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕವು ಡಾ.ನಾಗಪ್ಪ ಬಿ.ಈ ಅವರನ್ನು ನೇಮಕಮಾಡಿದೆ.
ಈಗಾಗಲೇ ಬಳ್ಳಾರಿಯ ಸರಳಾದೇವಿ ಕಾಲೇಜು, ಮಹಿಳಾ ಸರ್ಕಾರಿ ಕಾಲೇಜಿನಲ್ಲಿಯೂ ಕೆಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸದರಿ ಕಾಲೇಜಿನಲ್ಲಿ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯ, ಜಿಲ್ಲಾ ಮಟ್ಟ, ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಸಾಮಾಜಿಕ ಸಂಘ ಸಂಸ್ಥೆಗಳ ಒಡನಾಡಿಯಾಗಿ ನಿರಂತರ ಸಂಪರ್ಕದಲ್ಲಿದ್ದು, ಸಮಾಜದ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕನ್ನಡ ನಾಡು ನುಡಿ ನೆಲ ಜಲದ ಬಗ್ಗೆ ಅತೀವ ಕಾಳಜಿ ಹೊಂದಿರುವ ಇವರು ‘ದೇವದಾಸಿಯರ ಮಹಿಳೆಯರ ಸಮಸ್ಯೆ ಮತ್ತು ಸವಾಲುಗಳು-ಒಂದು ಸಮಾಜಶಾಸ್ತ್ರೀಯ ಅಧ್ಯಯನ’ ಎಂಬ ವಿಷಯದ ಕುರಿತು ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಇವರು ಅನೇಕ ಲೇಖನಗಳನ್ನು ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿದ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಅರ್ಜುನ ಗೊಳಸಂಗಿ, ಕಾರ್ಯದರ್ಶಿ ಸುಭಾಷ್ ಹೊದ್ಲೂರು ಹಾಗೂ ಕಲಬುರ್ಗಿಯ ದಸಾಪ ವಿಭಾಗೀಯ ಸಂಯೋಜಕರಾದ ಡಾ.ಗಾಂಧೀಜಿ ಮೊಳಕೇರಿ ಇವರುಗಳು ಡಾ.ನಾಗಪ್ಪ ಬಿ.ಈ. ಇವರನ್ನು ಬಳ್ಳಾರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕಮಾಡಲಾಗಿದೆ ಎಂದು ತಿಳಿಸಿದ್ದಾರೆ.