ಭರದಿಂದ ಸಾಗಿದ ಡಾ. ಪ್ರಭಾಕರ ಕೋರೆ ಅಮೃತ ಮಹೋತ್ಸವ ಕಾರ್ಯಕ್ರಮದ ಸಿದ್ದತೆ : ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಧಾನ, ಹಲವು ಘಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ
ಬೆಳಗಾವಿ, ಅ, 14 : ನಾಳೆ ಶನಿವಾರ ದಿ. 15 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಡಾ. ಪ್ರಭಾಕರ ಕೋರೆ ಅವರ ಜನ್ಮ ದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕಾಗಿ ಸಕಲ ಸಿದ್ದತೆ ಭರದಿಂದ ನಡೆದಿದೆ.

ನಗರದ ಕೆಎಲ್ ಇ ಬಳಿ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಸುಮಾರಿಗೆ ನಡೆಯಲಿರುವ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸೇರಿದಂತೆ ಮಹಾರಾಷ್ಟ್ರ ಕರ್ನಾಟಕದ ಬಹುತೇಕ ಸಚಿವರು, ಶಾಸಕರು, ಮುಖಂಡರು ಸೇರಿದಂತೆ ಡಾ. ಕೋರೆ ಅವರ ಸಾವಿರಾರು ಅಭಿಮಾನಿಗಳು, ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.