ಡಾ. ರಾಜ್‍ಕುಮಾರ್ ಅವರ 92 ನೇ ಜಯಂತಿ ಸರಳ ಆಚರಣೆ
ಬೆಂಗಳೂರು, ಏಪ್ರಿಲ್ 24,ಕೋವಿಡ್-19/ ಕೊರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ "ಪದ್ಮಭೂಷಣ, ಕನ್ನಡ ಚಲನಚಿತ್ರದ ಮೇರು ನಟ ಡಾ. ರಾಜ್‍ಕುಮಾರ್ ಅವರ 92 ನೇ ಜನ್ಮ ದಿನಾಚರಣೆ" ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. "ಕರ್ನಾಟಕ ರತ್ನ, ಡಾ. ರಾಜ್‍ಕುಮಾರ್" ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 