ದಾನೇಶ್ವರಿ ಸಂಗೀತ ಪಾಠಶಾಲೆಯಲ್ಲಿ ಡಾ. ಶಿವಕುಮಾರ ಸ್ವಾಮಿಜಿಯವರ ಜಯಂತಿ ಉತ್ಸವ

 ದಾನೇಶ್ವರಿ ಸಂಗೀತ ಪಾಠಶಾಲೆಯಲ್ಲಿ ಡಾ. ಶಿವಕುಮಾರ ಸ್ವಾಮಿಜಿಯವರ ಜಯಂತಿ ಉತ್ಸವ Dr. Shivakumara Swamiji's birth anniversary celebration at Daneshwari Music School

ಲೋಕದರ್ಶನ ವರದಿ 

ಹುಬ್ಬಳ್ಳಿ 04 :  ದಾನೇಶ್ವರಿ ಸಂಗೀತ ಪಾಠಶಾಲೆಯಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ,  ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ತ್ರೀವಿಧ ದಾಸೋಹಿ ತುಮಕೂರ ಸಿದ್ಧಗಂಗಾಮಠದ ಪರಮ ಪೂಜ್ಯ ಡಾ. ಶಿವಕುಮಾರ ಸ್ವಾಮಿಜಿಯವರ 119ನೇ ಜಯಂತಿ ಉತ್ಸವ ಅಂಗವಾಗಿ ಡಾ. ಶಿವಕುಮಾರ ಸ್ವಾಮಿಜಿಯವರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಸಂಗೀತ, ವಚನಗಳನ್ನು ಹಾಡುವುದರ ಮೂಲಕ ಗೌರವಾರೆ​‍್ಣ ಸಲ್ಲಿಸಿ, ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.    ಪದ್ಮಭೂಷಣ ಡಾ. ಪುಟ್ಟರಾಜ ಗವಾಯಿಗಳ 112ನೇ ಜನ್ಮದಿನ ಪ್ರಯುಕ್ತ  ಡಾ. ಪುಟ್ಟರಾಜ ಗವಾಯಿಗಳ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ  ವತಿಯಿಂದ ಮಾಲಾರೆ​‍್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ​‍್ಣ ಸಲ್ಲಿಸಲಾಯಿತು.   ನಡೆದಾಡುವ ದೇವರು, ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಸಿದ್ಧೇಶ್ವರಸ್ವಾಮಿಜಿ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪೂಜೆ ಸಲ್ಲಿಸಿ, ಮಾಲಾರೆ​‍್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನುಡಿ ನಮನ ಸಲ್ಲಿಸಲಾಯಿತು. ಶ್ರೀಗಳ ಗುಣಗಾನ ಮಾಡಲಾಯಿತು.      

 ದಾನೇಶ್ವರಿ ಸಂಗೀತ ಪಾಠಶಾಲೆಯ ಸಂಗೀತ ಶಿಕ್ಷಕಿ, ಕನ್ನಡ ಪ್ರಾಧ್ಯಾಪಕಿ ಪ್ರೊ ಶೋಭಾ ಜಾಬಿನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್‌.ಎಂ.ಸಾತ್ಮಾರ,  ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ,  ಡಾ. ಬಿ.ಎಸ್‌.ಮಾಳವಾಡ, ಸಿದ್ದಮ್ಮ, ಅನುಸೂಯಾ, ಶ್ವೇತಾ, ಗಂಗಾ, ಶಾಂತಾ, ಶಾಲಿನಿ, ರಾಜೇಶ್ವರಿ, ಸ್ನೇಹಾ, ಕವಿತಾ, ಡಾ ಮಿನಲ್, ಗೌರಿ ಶ್ರೇಯಾ ಹರ್ಷಿಕಾ ವೇದಾ ಶ್ರೇಷ್ಟಾ ಗೌತಮ್  ಶಿವಾನಿ ಡ್ರುವಂತ್ ಸಮೃಧ್, ಮಂದಾರ,ಇಂಜಿನಿಯರ್ ಮಲ್ಲಿಕಾರ್ಜುನ ಜಾಬಿನ, ಸುಭಾಸ್, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ದಾನೇಶ್ವರಿ ಸಂಗೀತ ಪಾಠಶಾಲೆಯ ಮಕ್ಕಳು ವಚನ ಗಾಯನ ಪ್ರಸ್ತುತಪಡಿಸಿದರು.  

 ನಿವೃತ್ ಗ್ರಂಥಪಾಲಕ ಡಾ. ಬಿ.ಎಸ್‌.ಮಾಳವಾಡ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ      ಶ್ರೀಗಳು ಸರ್ವವ್ಯಾಪಿ. ಅವರು ಭಕ್ತರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೊಣ. ಸಮಷ್ಠಿ ಕಲ್ಯಾಣವನ್ನೇ ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಶ್ರೇಷ್ಠ ಸಂತರು, ಶರಣರು ತುಮಕೂರ ಸಿದ್ಧಗಂಗಾಮಠದ ಪರಮ ಪೂಜ್ಯ ಲಿಂ. ಡಾ. ಶಿವಕುಮಾರ ಸ್ವಾಮಿಜಿಯವರು. ತುಮಕೂರ ಸಿದ್ಧಗಂಗಾಮಠ ಎಲ್ಲರಲ್ಲಿ ಪ್ರೀತಿ, ವಿಶ್ವಾಸ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ. ಪೂಜ್ಯರು ಸೇವೆಗಳಿಗೆ ಹೊಸ ಭಾಷ್ಯ ನೀಡಿದ್ದಾರೆ. ಕಾಯಕ, ದಾಸೋಹ, ಶಿವಯೋಗದ ಮಹತ್ವವನ್ನು ಎಲ್ಲರಲ್ಲಿ ಸದಾ ಜಾಗೃತಿಯನ್ನುಂಟು ಮಾಡಿದ ಮಹಾತ್ಮರು. ವಿದ್ಯಾರ್ಥಿಗಳಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದ ಪೂಜ್ಯರು ಸದಾ ಸ್ಮರಣಿಯರು. ಜ್ಞಾನಯೋಗಿ, ಗಾನಯೋಗಿ, ಶಿವಯೋಗಿ, ಪೂಜ್ಯ ಶ್ರೀಗಳು ಸಲ್ಲಿಸಿದ ಸೇವೆಯನ್ನು ಶ್ರದ್ಧಾ, ಭಕ್ತಿಯಿಂದ ಸ್ಮರಿಸಿದರು.