ಬಳ್ಳಾರಿ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ.100 ಪ್ರಗತಿಗೆ ಡಾ. ಶೋಭಾ ಸೂಚನೆ

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ.100 ಪ್ರಗತಿಗೆ ಡಾ. ಶೋಭಾ ಸೂಚನೆ

ಲೋಕದರ್ಶನ ವರದಿ 

ಬಳ್ಳಾರಿ  10: ಸಾರ್ವಜನಿಕರಿಗೆ ಸರ್ಕಾರಿ ಆರೋಗ್ಯ ಸೇವೆಗಳನ್ನು ಸಮರ​‍್ಕವಾಗಿ ತಲುಪಿಸುವ ನಿಟ್ಟಿನಲ್ಲಿ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಆರೋಗ್ಯ ಸೌಧದ ಪಿಸಿಪಿಎನ್‌ಡಿಟಿ ಹಾಗೂ ಕೆಪಿಎಂಇ ವಿಭಾಗದ ಉಪನಿರ್ದೇಶಕಿ ಮತ್ತು ಬಳ್ಳಾರಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಶೋಭಾ ಸೂಚಿಸಿದರು.  

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ತಾಯಿ-ಮಕ್ಕಳ ಆರೋಗ್ಯ, ಕುಟುಂಬ ಕಲ್ಯಾಣ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಕ್ಷಯರೋಗ ಹಾಗೂ ಕುಷ್ಠರೋಗ ನಿರ್ಮೂಲನೆ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಪ್ರಮುಖ ರಾಷ್ಟ್ರೀಯ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು.  


ಸುದ್ದಿ ಓದಿ