ಡಾ. ಸಿದ್ದರಾಮಯ್ಯನವರಿಗೆ ಸಂಗೀತ ರತ್ನ ಪ್ರಶಸ್ತಿ
Dr. Siddaramaiah receives Sangeetha Ratna Award
ಬಾಗಲಕೋಟೆ 30: ಬಿ.ವಿ.ವಿ. ಸಂಘದ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಪಕ ಮತ್ತು ನಾಡಿನ ಹಿಂದೂಸ್ತಾನಿ ಸಂಗೀತಗಾರರಾದ ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ (ರುದ್ರಮಠ) ಗೊರಟಾ ಅವರಿಗೆ ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೊಡದ ಹಿರೇಮಠ ಚೆನ್ನಬಸವೇಶ್ವರ ಸಂಸ್ಥಾನವು ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡಿದೆ.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡಿದೆ. ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ಅವರು ಕಳೆದ ಮೂವತ್ತು ವರ್ಷಗಳಿಂದ ಸಂಗೀತದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮವನ್ನು ನೀಡಿದ್ದಾರೆ. ಜ.31ರಂದು ಹಾರಕೊಡದಲ್ಲಿ ನಡೆಯುವ ಕಲ್ಯಾಣ ಕರ್ನಾಟಕದ 10ನೇ ಸಂಗೀತ ದಿನಾಚಾರಣೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸುವರು. ಪ್ರಶಸ್ತಿ ಪುರಸ್ಕೃತರಿಗೆ ಸಂಗೀತಗಾರರು, ಶಿಷ್ಯರು ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 