ಡಾ. ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡಬೇಕು: ದಾದಾ ಸನದಿ ಆಗ್ರಹ
Dr. Umashree should be given a ministerial position: Dada Sanadi demands
ಲೋಕದರ್ಶನ ವರದಿ
ತೇರದಾಳ 06: ಹಾಲಿ ವಿಧಾನ ಪರಿಷತ್ ಸದಸ್ಯೆ ಹಾಗೂ ಮಾಜಿ ಸಚಿವೆ ಡಾ. ಉಮಾಶ್ರೀ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅವರ ದೀರ್ಘಕಾಲದ ಸೇವೆಯನ್ನು ಗೌರವಿಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ದಾದಾ ಸನದಿ ಆಗ್ರಹಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಡಾ. ಉಮಾಶ್ರೀ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಶಾಸಕರಾಗಿ ಹಾಗೂ ಸಚಿವೆಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಸಚಿವೆಯಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಎರಡು ಜಿಲ್ಲೆಗಳ ಉಸ್ತುವಾರಿ ಸಚಿವೆಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಉತ್ತಮ ಆಡಳಿತ ನೀಡಿದ ಅನುಭವ ಅವರಿಗಿದೆ. ಆಡಳಿತಾತ್ಮಕ ದಕ್ಷತೆ, ಜನಪರ ಕಾಳಜಿ ಹಾಗೂ ಪಕ್ಷದ ಸಂಘಟನೆಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದು ತಿಳಿಸಿದರು.
ನೇಕಾರ ಸಮುದಾಯದ ಪರ ಧ್ವನಿಯಾಗಿ, ಮಹಿಳಾ ನಾಯಕಿಯಾಗಿ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಡಾ. ಉಮಾಶ್ರೀ ಅವರು ಹಲವು ದಶಕಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಮಹಿಳೆಯರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಸಮಸ್ಯೆಗಳ ಬಗ್ಗೆ ಸದಾ ಸ್ಪಂದಿಸುವ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ತತ್ವದಡಿ ಅನುಭವಿ ಮಹಿಳಾ ನಾಯಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುತ್ತಿದ್ದು, ಆ ನಿಟ್ಟಿನಲ್ಲಿ ಡಾ. ಉಮಾಶ್ರೀ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಪಕ್ಷವು ಅವರ ಸೇವೆಯನ್ನು ಗೌರವಿಸಬೇಕು ಹಾಗೂ ಉತ್ತರ ಕರ್ನಾಟಕ ಭಾಗದ ಜನರ ಆಶಯವನ್ನು ಈಡೇರಿಸಬೇಕು ಎಂದು ದಾದಾ ಸನದಿ ಒತ್ತಾಯಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 