ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಡಾ. ಬೆಳಗಲಿ ರಾಜೀನಾಮೆ.
ಮಹಾಲಿಂಗಪುರ: ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ವಿಧಾನ ಸಭಾ ಚುನಾವಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ.ಎ.ಆರ್. ಬೆಳಗಲಿ ತಿಳಿಸಿದ್ದಾರೆ.
ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರಿಗೆ ಪತ್ರ ಬರೆದಿರುವ ಅವರು, ತಾವು ಕಳೆದ 25 ವರ್ಷಗಳಿಂದ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪ್ರತಿ ಹಂತದಲ್ಲೂ ಪಕ್ಷದ ಪರ ನಿಂತಿದ್ದು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡಿದ್ದು ಕಾಂಗ್ರೆಸ್ ಪಕ್ಷವನ್ನೇ ತಮ್ಮ ಸರ್ವಸ್ವ ಎಂದು ಭಾವಿಸಿ ಪಕ್ಷಕ್ಕಾಗಿ ದುಡಿದಿದ್ದೇನೆ ಆದರೆ ನನ್ನ ದುಡಿಮೆಯನ್ನು ಪಕ್ಷ ಗಣನೆಗೆ ತೆಗೆದುಕೊಂಡಿಲ್ಲದಿರುವುದು ಬೇಸರವಾಗಿದೆ ಹಾಗಾಗಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವದಾಗಿ ಹಾಗೂ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಎಲ್ಲಾ ಗಣ್ಯರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.