‘ಗುರುಕುಲ ವಿದ್ಯಾವಾಚಸ್ಪತಿ ಕವಿತಾಕೃಷ್ಟ’ ಪ್ರಶಸ್ತಿಗೆ ಡಾ. ಬಸೆಟ್ಟಿ ಆಯ್ಕೆ
ಬಳ್ಳಾರಿ 16: ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಅಧ್ಯಯನ ವಿಭಾಗದ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಎಸ್.ಬಿ. ಬಸೆಟ್ಟಿಯವರ ಸಾಹಿತ್ಯ, ಸಮಾಜ ಸೇವೆ, ಸಂಘಟನೆ ಮತ್ತು ಶಿಕ್ಷಣ ವಿವಿಧ ಕ್ಷೇತ್ರದ ಸಾಧನೆ ಗುರುತಿಸಿ ಗುರುಕುಲ ಕಲಾ ಪ್ರತಿಷ್ಠಾನ(ರಿ) ಕೇಂದ್ರ ಸಮಿತಿ ತುಮಕೂರು ನವ್ಹಂಬರ್ 18, 2023 ಶನಿವಾರ ವಿಜಯನಗರ ಜಿಲ್ಲೆ ಹಂಪಿಯ ಹೇಮಕೂಟ ಶೂನ್ಯ ಸಿಂಹಾಸನ ಶ್ರೀ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದಲ್ಲಿ ಸುವರ್ಣ ಕರ್ನಾಟಕ ಸಂಭ್ರಮದ ನೆನಪಿನಲ್ಲಿ ಆಯೋಜಿಸಿರುವ ಅಖಿಲ ಭಾರತ ಮೂರನೇ ಗುರುಕುಲ ಕಲಾ ಸಮ್ಮೇಳನದಲ್ಲಿ ಕೊಡ ಮಾಡುವ ‘ಗುರುಕುಲ ವಿದ್ಯಾವಾಚಸ್ಪತಿ ಕವಿತಾಕೃಷ್ಟ’(ಸಾಹಿತ್ಯ ಕ್ಷೇತ್ರ) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗುರುಕುಲ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಹುಲಿಯೂರದುರ್ಗ ಲಕ್ಷ್ಮೀ ನಾರಾಯಣ್ ಮತ್ತು ಗುರುಕುಲ ಸಂಸ್ಥಾಪಕ ಕಾರ್ಯಾಧ್ಯಕ್ಷರಾದ ಡಾ.ಶಿವರಾಜಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮ್ಮೇಳನದಲ್ಲಿ ಶ್ರೀ ಮ.ನಿ.ಪ್ರ.ಸ್ವ. ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೊಸಪೇಟೆ ಪಾವನ ಸಾನ್ನಿಧ್ಯದಲ್ಲಿ, ವಿದ್ಯಾವಾಚಸ್ಪತಿ ಡಾ. ಕವಿತ್ತಾ ಕೃಷ್ಣರವರು, ಶ್ರೀ ನಿಡಸಾಲೇ ಪುಟ್ಟಸ್ವಾಮಯ್ಯನವರು, ಪದ್ಮಶ್ರೀ ಪುರಸ್ಕೃತ ಮಾತಾ ಮಂಜಮ್ಮ ಜೋಗತಿಯವರು ಸೇರಿದಂತೆ ನಾಡಿನ ಹಿರಿಯ ಸಾಹಿತಿಗಳು, ಕಲಾವಿದರು ಗೌರವ ಉಪಸ್ಥಿತಿಯಲ್ಲಿ ಈ ಸಮ್ಮೇಳನದಲ್ಲಿ ಇವರು ಪ್ರಶಸ್ತಿಯನ್ನು ಸ್ವೀಕರಿಸಲ್ಲಿದ್ದಾರೆ.
ಪ್ರಸ್ತುತ ಇವರು ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಅಧ್ಯಯನ ವಿಭಾಗದಲ್ಲಿ ಕಳೆದ 18 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕರಾಗಿ, ಸಂಶೋಧನೆ, ಸಮಾಜಸೇವೆ ಮತ್ತು ಕ್ಷೇತ್ರಕಾರ್ಯ, ಸಾಂಸ್ಕೃತಿಕ ಚಟುವಟಿಕೆ, ಸಂಘಟನೆ, ಶಿಕ್ಷಣ ಮತ್ತು ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣ, ಸಮ್ಮೇಳನ, ಚರ್ಚೆ, ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ವಿವಿಧ ವಿಷಯಗಳ ಕುರಿತು ಶೈಕ್ಷಣಿಕವಾಗಿ ದಿನಪತ್ರಿಕೆ ಮತ್ತು ಮಾಸಪತ್ರಿಕೆ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ 17 ಪ್ರಶಸ್ತಿಗಳು ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇವರ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಬಿ. ಗುಡಸಿ, ಕುಲಸಚಿವರುಗಳು, ಸಿಂಡಿಕೇಟ್ ಸದಸ್ಯರು, ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕ/ಪ್ರಾಧ್ಯಾಪಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸ್ನೇಹಿತರು ಶುಭ ಹಾರೈಸಿ ಅಭಿನಂದಿಸಿದ್ದಾರೆ.