ವಿಜಯಪುರ

ದೇಶದ ಶಿಕ್ಷಣ ಕ್ಷೇತ್ರಕ್ಕೆ ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ರ ಕೊಡುಗೆ ಅಪಾರ : ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್

ದೇಶದ ಶಿಕ್ಷಣ ಕ್ಷೇತ್ರಕ್ಕೆ ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ರ ಕೊಡುಗೆ ಅಪಾರ : ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್
Dr. Maulana Abdul Kalam Azad's contribution to the education sector of the country is immense: Seni

ಲೋಕದರ್ಶನ ವರದಿ 

            ವಿಜಯಪುರ 11:  ನಗರದ ಮಧ್ಯಭಾಗದಲ್ಲಿರುವ ಆಜಾದ ರಸ್ತೆಯ ವೃತ್ತದಲ್ಲಿ ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಸಚಿವರಾದ ಭಾರತ ರತ್ನ ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ರ ಭಾವಚಿತ್ರಕ್ಕೆ ಮಾಲಾರೆ​‍್ಣ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ 138 ನೇ ಜಯಂತಿಯನ್ನು ಆಚರಿಸಲಾಯಿತು. 

            ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಮಾತನಾಡುತ್ತಾ ಡಾ.ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು ದೇಶದ ಶಿಕ್ಷಣ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ ಮಹಾನ ಚಿಂತಕರಾಗಿದ್ದಾರೆ ಎಂದು ಹೇಳಿದರು. ದೇಶದ ಪ್ರಥಮ ಶಿಕ್ಷಣ ಮಂತ್ರಿಯಾಗಿ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು ದೇಶದ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

           ತಮ್ಮ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹತ್ತು ಹಲವಾರು ಗುಣಾತ್ಮಕ ಬದಲಾವಣೆಗಳನ್ನು ತಂದು ದೇಶದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ಹಾಗೂ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಫಯಾಜ್ ಕಲಾದಗಿ, ಶಕ್ತಿಕುಮಾರ್, ಶಿಕ್ಷಕರು, ಶಾಲಾ ಮಕ್ಕಳು ಸೇರಿದಂತೆ ವಿವಿಧ ಗಣ್ಯರು ಹಾಗೂ ಸಾರ್ವಜನಿಕರು ಇದ್ದರು. 


ಸುದ್ದಿ ಓದಿ