ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಡಾ ರಂಭಾಪುರಿ ಶ್ರೀಗಳು
ಲಕ್ಷ್ಮೇಶ್ವರ " 09 ; ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ ಜರುಗಲಿರುವ ದಸರಾ ಧರ್ಮ ಸಮ್ಮೇಳನಕ್ಕೆ ದಯ ಮಾಡಿಸುವ ಮುನ್ನ ಗದಗ ಜಿಲ್ಲೆ , ಲಕ್ಷ್ಮೇಶ್ವರ ತಾಲೂಕಿನ ಶ್ರೀಮದ್ ರಂಭಾಪುರಿ ಶಾಖಾ ಮಠ ಭೂಕೈಲಾಸ ಮುಕ್ತಿಮಂದಿರ ಕ್ಷೇತ್ರದಲ್ಲಿರುವ ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಡಾ. ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳು. ಈ ಸಮಯದಲ್ಲಿ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಇತರ ಶ್ರೀಗಳು ಇದ್ದರು.