ಆಹಾರ, ಮಾಸ್ಕ್ ವಿತರಿಸಿ ಸಿಕ್ಕಿಂ ಮೂಲದವರನ್ನು ಬೀಳ್ಕೊಟ್ಟ ಡಾ. ಅಶ್ವತ್ಥ್ ನಾರಾಯಣ
ಬೆಂಗಳೂರು, ಮೇ 19,ಕೋವಿಡ್ ಲಾಕ್‌ಡೌನ್ ಸಡಲಿಕೆ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಪ್ರಯಾಣ ಬೆಳೆಸಿರುವ ಸಿಕ್ಕಿಂ ಮೂಲದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಆಹಾರ ಮತ್ತು ಮಾಸ್ಕ್,ಸ್ಯಾನಿಟೈಸರ್ ಕಿಟ್ ನೀಡಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾ ಯಣ ಅವರು ಬೀಳ್ಕೊಟ್ಟರು. ಸಿಕ್ಕಿಂಗೆ ಪ್ರಯಾಣ ಬೆಳೆಸಿರುವ ಜನರನ್ನು ಮಂಗಳವಾರ ಆರ್‌ಟಿ ನಗರದಲ್ಲಿ ಭೇಟಿಯಾಗಿ, ಕಿಟ್ ವಿತರಿಸಿದ ಬಳಿಕ ಡಾ.ಅಶ್ವತ್ಥ ನಾರಾ ಯಣ ಮಾತನಾಡಿದರು.ಶಿಕ್ಷಣ ಹಾಗೂ ಉದ್ಯೋಗದ ನಿಮಿತ್ತ ನಗರದಲ್ಲಿ ನೆಲೆಸಿರುವ ಸಿಕ್ಕಿ ಮೂಲದವರು ತಮ್ಮ ಕುಟುಂಬ ಸದಸ್ಯರನ್ನು ಭೇಟಿಯಾಗಲು ಊರಿಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರಯಾಣಕ್ಕೆ ಅನುಕೂಲವಾಗುವಂತೆ 1000 ಮಂದಿಗೆ ಡಾ.ಅಶ್ವತ್ಥ ನಾರಾಯಣ ಫೌಂಡೇಶನ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ಕಿಟ್ ಹಾಗೂ ಆಹಾರವನ್ನು ಪೂರೈಸಲಾಗಿದೆ ಎಂದರು. ಸಿಕ್ಕಿಂ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬದುಕು ಕಟ್ಟಿಕೊಳ್ಳಲು ಬೆಂಗಳೂರು ಅತ್ಯಂತ ಪ್ರಶಸ್ತ ಸ್ಥಳ.ನಿಮ್ಮ ಮನೆಯವ ರನ್ನು ಭೇಟಿ ಮಾಡಿ ವಾಪಸ್ ಬನ್ನಿ. ಕರ್ನಾಟಕದಲ್ಲಿ ನಿಮಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು.ನಿಮಗೆ ಎಲ್ಲಾ ರೀತಿಯ ಸೇವೆ, ಬೆಂಬಲ ನೀಡಲು ಸರ್ಕಾರ ಸಿದ್ಧ. ನಿಮ್ಮ ಸಲಹೆ ಹಾಗೂ ಅಭಿಪ್ರಾಯವನ್ನು ನಮ್ಮ ಜತೆ ಹಂಚಿಕೊಳ್ಳಿ ನಿಮ್ಮ ಪ್ರಯಾಣ ಸುರಕ್ಷಿತವಾಗಿರಲಿ ಎಂದು ಹಾರೈಸಿದರು. ಬೆಂಗಳೂರಿನಲ್ಲಿ ನೆಲೆಸಿದ್ದ ಸಿಕ್ಕಿಂ ಮೂಲದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಆಹಾರ, ಮಾಸ್ಕ್, ವಿತರಿಸಿ, ಆತ್ಮೀಯವಾಗಿ ಬೀಳ್ಕೊಟ್ಟ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರಿಗೆ ದೂರವಾಣಿ ಕರೆ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್, ಸಹಕಾರಕ್ಕಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 