ಕರಡು ಮತದಾರರ ಪಟ್ಟಿಯ ಸಂಬಂಧ ಸಭೆ
ಬಳ್ಳಾರಿ 30: ಬಳ್ಳಾರಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್ಗಳ 333 ಮತಗಟ್ಟೆ ಕೇಂದ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿದ ಮಾಹಿತಿಯೊಂದಿಗೆ ರಾಜಕೀಯ ಪಕ್ಷಗಳಿಗೆ ಒಂದು ಪ್ರತಿ ಮತದಾರರ ಪಟ್ಟಿಯನ್ನು ನೀಡುವ ಸಂಬಂಧದ ಸಭೆಯು ಶುಕ್ರವಾರ ನಡೆಯಿತು.
ಸದರಿ ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಆಕ್ಷೇಪಣೆಗಳು ಕಂಡು ಬಂದಲ್ಲಿ ಮಾ. 29ರೊಳಗೆ ಆಕ್ಷೇಪಣೆಯನ್ನು ಸಲ್ಲಿಸಲು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಕೋರಿದರು.
ಈ ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.