ನಾಟಕ, ಕಲೆ, ಸಾಹಿತ್ಯ ಚಟುವಟಿಕೆಗಳು ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಸೃಜನಶೀಲ ಮಾಧ್ಯಮವಾಗಿವೆ : ಎನ್.ರವಿಕುಮಾರ್
Drama, art, and literary activities are creative mediums for expressing human emotions: N. Ravikumar
ಲೋಕದರ್ಶನ ವರದಿ
ಬಳ್ಳಾರಿ 14: ನಾಟಕ, ಕಲೆ, ಸಾಹಿತ್ಯ ಚಟುವಟಿಕೆಗಳು ಸಮಾಜದ ಜೀವನಾಡಿಯಾಗಿದ್ದು ಮನುಷ್ಯನ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಸೃಜನಶೀಲ ಮಾಧ್ಯಮವಾಗಿವೆ ಎಂದು ಕರ್ನಾಟಕ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದರು. ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ರಂಗತೋರಣ ಸಾಂಸ್ಕೃತಿಕ ಸಂಘಟನೆ ಹಮ್ಮಿಕೊಂಡಿದ್ದ ಕಪ್ಪಗಲ್ಲು ನಾಟಕೋತ್ಸವದ ಎರಡನೇ ದಿನದ ನಾಟಕಕ್ಕೆ ಚಾಲನೆ ಹಾಗೂ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು.
ಕಲೆ, ಸಾಹಿತ್ಯ, ರಂಗಭೂಮಿ ಚಟುವಟಿಕೆಗಳಿಂದ ಸಾಮಾಜಿಕ ಜಾಗೃತಿ ಮೂಡುತ್ತದೆ. ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ಜೊತೆಗೆ ನಮ್ಮ ಮೂಲ ಸಂಸ್ಕೃತಿ, ಪರಂಪರೆ, ಸಂಪ್ರದಾಯ ಮುಂದಿನ ಪೀಳಿಗೆಗೆ ತಲುಪಿಸಲು ಸಾಧ್ಯವಾಗುತ್ತದೆ. ನೈತಿಕ ಮೌಲ್ಯಗಳನ್ನು ಬಿತ್ತಲು ರಂಗಭೂಮಿ ಚಟುವಟಿಕೆಗಳು ಹೆಚ್ಚು ಪೂರಕವಾಗಿ ಕಾರ್ಯನಿರ್ವಹಿಸುತ್ತವೆ. ಸೃಜನಶೀಲತೆಯೂ ಹೆಚ್ಚುತ್ತದೆ.
ಉತ್ತಮ ನಾಟಕಗಳ ವೀಕ್ಷಣೆಯಿಂದ ಕಲ್ಪನಾಶಕ್ತಿ, ಚಿಂತನಾ ಸಾಮರ್ಥ್ಯ ವೃದ್ಧಿಸುತ್ತದೆ ಹಾಗೂ ಪರಸ್ಪರ ಸಹಬಾಳ್ವೆಯ ಮನೋಭಾವ ಬೆಳೆಯುತ್ತದೆ. ಉತ್ತಮ ವಿಚಾರ ಮತ್ತು ಸಂದೇಶಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗುತ್ತದೆ. ಕಲೆ, ಸಾಹಿತ್ಯ ಹಾಗೂ ರಂಗಭೂಮಿ ಕೇವಲ ಮನರಂಜನಯ ಸಾಧನಗಳಲ್ಲ. ಅವು ಸಮಾಜದ ಜಾಗೃತಿ, ಸಂಸ್ಕೃತಿ ಸಂರಕ್ಷಣೆ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉನ್ನತ ಪದವಿ ಪಡೆಯುವಂತಾಗಲಿ. ಆದರೆ, ಫೇಲ್ ಆದ ವಿದ್ಯಾರ್ಥಿಗಳು ಕೊರಗುವುದು ಬೇಡ. ಪರೀಕ್ಷೆಯಲ್ಲಿ ಫೇಲಾಗುವುದು ಅಂತಿಮವಲ್ಲ. ಬದುಕಿನಲ್ಲಿ ಪಾಸ್ ಆಗುವುದು ದೊಡ್ಡ ಸಂಗತಿ. ಸೋಲು ಹೊಸದೊಂದು ಕಲಿಯುವ ಅನುಭವ ಎಂದೇ ಭಾವಿಸಬೇಕು. ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧರಿಸುವುದಿಲ್ಲ. ಸೋಲುಗಳು ಮತ್ತಷ್ಟೂ ಗಟ್ಟಿಯನ್ನಾಗಿಸುತ್ತವೆ. ಬದುಕಿನಲ್ಲಿ ಸಂಕಷ್ಟಗಳನ್ನು ಎದುರಿಸುವ ಸಾಮರ್ಥ್ಯವನ್ನು ರೂಪಿಸುತ್ತವೆ. ತಪ್ಪುಗಳಿಂದ ಕಲಿತು ಮತ್ತೆ ಪುಟಿದೇಳಬೇಕು ಎಂದು ಸಲಹೆ ನೀಡಿದರು.
ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಪುರುಷೋತ್ತಮ ರೆಡ್ಡಿ ದಮ್ಮೂರು, ಆಹಾರ ಮತ್ತು ಸರಬರಾಜು ಇಲಾಖೆಯ ಬಿ.ಕಟ್ಟೆಗೌಡ, ನಿವೃತ್ತ ಸಹಾಯಕ ಓಷಧ ನಿಯಂತ್ರಣಾಧಿಕಾರಿ ಕೆ.ಎಸ್.ಮಲ್ಲಿಕಾರ್ಜುನ, ಗ್ರಾಮದ ಮುಖಂಡರಾದ ದೊಡ್ಡ ರಾಮಾಂಜಿನಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಂಗತೋರಣ ಸಂಸ್ಥೆಯ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ಅವರು ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಆಚಾರ್ ಕಪ್ಪಗಲ್ಲು ಹಾಗೂ ಮೆಹತಾಬ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಜೇವರ್ಗಿ ರಾಜಣ್ಣ ಅವರ ರಚನೆ-ನಿರ್ದೇಶನದ ಕುಂಟಕೋಣ ಮೂಕ ಜಾಣ ನಾಟಕ ಪ್ರದರ್ಶನಗೊಂಡಿತು. ಕಪ್ಪಗಲ್ಲು, ಸಿರಿವಾರ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಾಟಕ ವೀಕ್ಷಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 