ಇಂದು ತುಂಗಭದ್ರಾ ಕಾಲುವೆಗೆ ಕುಡಿಯಲು ನೀರು ಬಿಡುಗಡೆ
Drinking water released into Tungabhadra canal today
ಬಳ್ಳಾರಿ 02: ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ನಾಳೆಯಿಂದ ತುಂಗಭದ್ರಾ ಎಚ್‌ಎಲ್‌ಸಿ ಕಾಲುವೆಗೆ ಕುಡಿಯಲು ನೀರು ಹರಿಸಲಾಗುತ್ತದೆ. ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅಕ್ರಮವಾಗಿ ನೀರು ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ, ಕೈಗಾರಿಕೆಗಳು ಅಥವಾ ವಾಣಿಜ್ಯ ಉದ್ದೇಶಗಳಿಗಾಗಿ ಕಾಲುವೆಯಿಂದ ಅಕ್ರಮವಾಗಿ ನೀರುಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಾಲುವೆ ಹಾದುಹೋಗುವ ಮಾರ್ಗದುದ್ದಕ್ಕೂ ಪೊಲೀಸ್, ನೀರಾವರಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಮೂಲಕ ನಿರಂತರವಾಗಿ ಬೀಟ್ ವ್ಯವಸ್ಥೆ ಕೈಗೊಳ್ಳುವ ಮೂಲಕ ನಿಗಾವಹಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ಸಮರ್ಕ ಪೂರೈಕೆಗಾಗಿ ಅಧಿಕಾರಿಗಳು ಪಂಪಿಂಗ್ ಶೆಡ್ಯೂಲ್ ಸಿದ್ಧಪಡಿಸಿಕೊಳ್ಳಬೇಕು. ನೀರು ಬಂದ ನಂತರಕೆರೆ ತುಂಬಿಸಿಕೊಳ್ಳಲು ಮೋಟಾರ್ ಮತ್ತು ಪಂಪ್‌ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಮುಂಬರುವ ಬೇಸಿಗೆಯ ದಿನಗಳಲ್ಲಿ ನೀರಿಗೆತೊಂದರೆಯಾಗದಂತೆ ಕೆರೆಗಳಲ್ಲಿ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 