ಕಾರವಾರ

ಸಸಿ ವಿತರಿಸಿ ಅಜಾದಿ ಕಾ ಅಮೃತಮಹೋತ್ಸವಕ್ಕೆ ಚಾಲನೆ

ಸಸಿ ವಿತರಿಸಿ ಅಜಾದಿ ಕಾ ಅಮೃತಮಹೋತ್ಸವಕ್ಕೆ ಚಾಲನೆ

ಬನವಾಸಿ 11: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗುತ್ತಿರುವ ಹಿನ್ನಲೆಯಲ್ಲಿ  ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವನ್ನು ಅಜಾದಿ ಕಾ ಅಮೃತಮಹೋತ್ಸವ ಎಂದು ದೇಶಾದ್ಯಂತ ಆಚರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು ಆ ಪ್ರಯುಕ್ತ ಬನವಾಸಿ ಗ್ರಾಮ ಪಂಚಾಯತಿ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸ್ವ ಸಹಾಯ ಸಂಘದ ಸದಸ್ಯರಿಗೆ ಗಿಡಗಳನ್ನು ವಿತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  

ಕಾರ್ಯಕ್ರಮಕ್ಕೆ ಚಾಲನೆ ನೀಡಿದ  ತಾಲ್ಲೂಕ ಪಂಚಾಯತಿ  ಕಾರ್ಯನಿರ್ವಾಹಕ ಅಧಿಕಾರಿ ಎಫ್‌.ಜಿ.ಚಿನ್ನಣ್ಣನವರ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗುತ್ತಿರುವ ಹಿನ್ನಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಅಜಾದಿ ಕಾ ಅಮೃತಮಹೋತ್ಸವ ಎಂದು ರಾಷ್ಟಗಾನದ ಮೂಲಕ  ದೇಶಾದ್ಯಂತ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದು. ಇದರ ಅಂಗವಾಗಿ ರಾಜ್ಯ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ಬನವಾಸಿಯಲ್ಲಿ ಈ ಕಾರ್ಯಕ್ರಮವನ್ನು ಗಿಡಗಳನ್ನು ನೀಡುವುದರ ಮೂಲಕ ಹಮ್ಮಿಕೊಳ್ಳಲಾಗಿದೆ. ನಾವೇಲ್ಲರು ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು. ಬನವಾಸಿ ಪಿಎಸ್‌ಐ ಹನುಮಂತ ಬಿರಾದಾರ ಮಾತನಾಡಿ, ನಾವೇಲ್ಲರು ನಮ್ಮ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟ ಮತ್ತು ಹೋರಾಟಗಾರರ ಜೀವನ ಚರಿತ್ರೆಯನ್ನು  ತಿಳಿಸಿಕೊಡುವ ಕಾರ್ಯ ಮಾಡಬೇಕು. ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ವೀರರನ್ನು ಪ್ರತಿದಿನ ಸ್ಮರಣೆ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.ವಲಯ ಅರಣ್ಯಾಧಿಕಾರಿ ಉಷಾ ಕಬ್ಬೇರ, ಗ್ರಾಪಂ ಅಧ್ಯಕ್ಷೆ ತುಳಸಿ ಆರೇರ,  ಪಿಡಿಓ ಪರಶುರಾಮ್ ಮಳವಳ್ಳಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಒಕ್ಕೂಟ ಅಧ್ಯಕ್ಷೆ  ಜಯಶ್ರೀ ಉಳ್ಳಾಗಡ್ಡಿ, ಗ್ರಾಪಂ ಉಪಾಧ್ಯಕ್ಷ,  ಸದಸ್ಯರು, ಸ್ವ ಸಹಾಯ ಸಂಘದ ಸದಸ್ಯರು ಇದ್ದರು. 


ಸುದ್ದಿ ಓದಿ