ಫಿಟ್ ಇಂಡಿಯಾ ಪ್ರೀಡಮ್ ರನ್ 2.0 ಓಟಕ್ಕೆ ಚಾಲನೆ
ಬೈಲಹೊಂಗಲ 24: ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಎಲ್ಲರೂ ಪ್ರತಿ ನಿತ್ಯ ದೈಹಿಕ ಚಟುವಟಿಕೆಗಳಾದ ಯೋಗ, ವೇಗದ ನಡಿಗೆ, ಮಾಡಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದು ತಾಪಂ.ಇಓ ಸುಭಾಷ ಸಂಪಗಾಂವಿ ಹೇಳಿದರು.
ಅವರು ಗುರುವಾರ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಿಪಂ. ರಾಷ್ರ್ಟೀಯ ಆರೋಗ್ಯ ಅಭಿಯಾನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಫಿಟ್ ಇಂಡಿಯಾ ಪ್ರೀಡಮ್ ರನ್ 2.0 ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಬಾಬು ಕುಡಸೋಮನ್ನವರ ಓಟಕ್ಕೆ ಹಸಿರು ನಿಶಾನೆ ತೋರಿಸುವದರ ಮೂಲಕ ಚಾಲನೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದನ್ನವರ, ಡಾ.ಮಹೇಶ ರಾವುತನವರ, ಎಸ್.ಎಸ್.ಮುತ್ನಾಳ, ಎನ್.ಡಿ.ಖಾಡೆ, ಎಸ್.ಜಿ.ವ್ಹಿ.ಕಾಲೇಜು, ಗಣಾಚಾರಿ ಕಾಲೇಜಿನ ವಿದ್ಯಾರ್ಥಿಗಳು, ಭೋದಕ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಪಿಟ್ ಇಂಡಿಯಾ ಪ್ರೀಡಂ ರನ್ 2.0 ಸ್ಪರ್ದೆಯಲ್ಲಿ ಸುಮಾರು 180 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಥಮ, ದ್ವೀತಿಯ, ತೃತಿಯ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು.