ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್ಗೆ ಚಾಲನೆ
ಬೆಂಗಳೂರು: ಏಪ್ರಿಲ್ 24: ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್ಗೆ ಇಂದು ಚಾಲನೆ ನೀಡಲಾಯಿತು. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಗೌರವಾನ್ವಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದರು.
ಬಳಿಕ ಮಾತನಾಡಿದ ರಾಜ್ಯಪಾಲರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ರ 2 ನೇ ಆವೃತ್ತಿಯನ್ನು ಕರ್ನಾಟಕ ರಾಜ್ಯಕ್ಕೆ ಆಯೋಜಿಸುವ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಗೌರವಾನ್ವಿತ ರಾಜ್ಯಪಾಲರು, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು, ಭಾರತ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಜೈನ್ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಸಹಯೋಗದೊಂದಿಗೆ ಈ ಆಟಗಳನ್ನು ಆಯೋಜಿಸುತ್ತದೆ ಅಭಿನಂದನಾರ್ಹ ಎಂದರು.
ಕರ್ನಾಟಕ ರಾಜ್ಯವು ಅಂತರರಾಷ್ಟ್ರೀಯ ಸೌಲಭ್ಯಗಳೊಂದಿಗೆ ಕ್ರೀಡಾ ಸ್ಥಳಗಳನ್ನು ವ್ಯಾಪಕವಾಗಿ ನವೀಕರಿಸುತ್ತಿದೆ. ಈ ಸುಧಾರಣೆಗಳು ರಾಜ್ಯದಲ್ಲಿ ಹೊಸ ಕ್ರೀಡಾ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ರಾಜ್ಯಪಾರು ತಿಳಿಸಿದರು.
ಉತ್ತಮ ಮತ್ತು ಆರೋಗ್ಯಕರ ಜೀವನಕ್ಕಾಗಿ ಜನರು ತಮ್ಮ ದಿನಚರಿಯಲ್ಲಿ ಕ್ರೀಡೆ ಮತ್ತು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಬೇಕು. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೈನಂದಿನ ಜೀವನದಲ್ಲಿ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡುವಂತೆ ಅನೇಕ ಸಂದರ್ಭಗಳಲ್ಲಿ ಜನರನ್ನು ಒತ್ತಾಯಿಸಿದ್ದಾರೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಯವರ ಕನಸಿನ ಕಾರ್ಯಕ್ರಮ – ಖೇಲೋ ಇಂಡಿಯಾದ ಒಂದು ಭಾಗವಾಗಿದೆ. ಖೇಲೋ ಇಂಡಿಯಾ ವಾರ್ಷಿಕ ಕ್ರೀಡೆಗಳು ಮತ್ತು ಸ್ಪರ್ಧೆಗಳಲ್ಲಿ ಯುವಕರ ಸಾಮೂಹಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಎಲ್ಲರಿಗೂ ಕ್ರೀಡೆಗಳು ಮತ್ತು ಶ್ರೇಷ್ಠತೆಗಾಗಿ ಕ್ರೀಡೆಗಳನ್ನು ಸಹ ಉತ್ತೇಜಿಸಬೇಕು. 7. ಫಿಟ್ ಇಂಡಿಯಾ ಆಂದೋಲನವು ಯುಜಿಸಿಯ ರಾಷ್ಟ್ರವ್ಯಾಪಿ ಅಭಿಯಾನವಾಗಿದೆ. ದೇಶದಾದ್ಯಂತ ವಿಶ್ವವಿದ್ಯಾನಿಲಯಗಳು ಫಿಟ್ ಇಂಡಿಯಾ ಆಂದೋಲನವನ್ನು ಜಾರಿಗೆ ತರಲು ತರುವಂತೆ ಸೂಚನೆಯನ್ನೂ ನೀಡಲಾಗಿದೆ. ಭಾರತದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಆಗಸ್ಟ್ 2017 ರಲ್ಲಿ ದೇಶದ ಮೂಲೆ ಮೂಲೆಗಳಿಂದ ಕ್ರೀಡಾ ಪ್ರತಿಭೆಗಳನ್ನು ಪತ್ತೆಹಚ್ಚಲು ರಾಷ್ಟ್ರೀಯ ಕ್ರೀಡಾ ಪ್ರತಿಭೆ ಹುಡುಕಾಟ ಪೋರ್ಟಲ್ ಅನ್ನು ಪ್ರಾರಂಭಿಸಿದ್ದಾರೆ. ಯುವ ಆಟಗಾರರು ತಮ್ಮ ಸಾಧನೆಗಳನ್ನು ಈ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುತ್ತಾರೆ. ಅದರಲ್ಲಿ ಶಾರ್ಟ್ಲಿಸ್ಟ್ ಮಾಡಿದ ಅರ್ಜಿದಾರರನ್ನು ಪ್ರಯೋಗಕ್ಕೆ ಕರೆಯಲಾಗುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ತರಬೇತಿ ನೀಡಲಾಗುತ್ತದೆ. ಅಲ್ಲದೇ, ವಿಕಲಾಂಗ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು, ಅಂಗವಿಕಲರಿಗೆ ಕ್ರೀಡಾ ಕೇಂದ್ರಗಳನ್ನು ದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದರಲ್ಲಿ ಒಂದು ಗ್ವಾಲಿಯರ್ ಎಂ.ಪಿ. ನಲ್ಲಿ ನಿರ್ಮಾಣ ಹಂತದಲ್ಲಿದೆ ಎಂದು ತಿಳಿಸಿದರು.
ಟೋಕಿಯೊ ಒಲಿಂಪಿಕ್-2020 ಕ್ರೀಡಾಕೂಟದಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿದೆ. 7 ಪದಕ ಗೆದ್ದಿದ್ದಾರೆ. ಪ್ಯಾರಾಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ಮೂಲಕ, ಭಾರತೀಯ ಪ್ಯಾರಾ ಕ್ರೀಡಾಪಟುಗಳು ಈ ಬಾರಿ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳನ್ನು ಗೆದ್ದಿದ್ದಾರೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಅತಿದೊಡ್ಡ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಯಾಗಿದೆ. ಒಲಿಂಪಿಕ್ ಮತ್ತು ಏಷ್ಯನ್ ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳನ್ನು ಗುರುತಿಸುವುದು ಮತ್ತು ತರಬೇತಿ ನೀಡುವುದು ಈ ಆಟಗಳ ಉದ್ದೇಶವಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಮಾನ್ಯ ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾದ ನಿಶಿತ್ ಪ್ರಮಾಣಿಕ್, ಕರ್ನಾಟಕ ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ, ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ್, ಕೆ.ಸಿ ನಾರಾಯಣಗೌಡರು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.