ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಾರ್ಯಾಗಾರಕ್ಕೆ ಚಾಲನೆ
ಹೂವಿನಹಡಗಲಿ 16: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಠಿಣವಾಗಿರುವ ಇಂಗ್ಲಿಷ್ನಲ್ಲಿ ಸುಲಭವಾಗಿ ಉತ್ತೀರ್ಣರಾಗಲು ಕಾರ್ಯಾಗಾರಗಳು ಅಗತ್ಯವಾಗಿವೆ ಎಂದು ಪ್ರಾಚಾರ್ಯ ಕೋರಿ ಹಾಲೇಶ್ ಹೇಳಿದರು.
ಪಟ್ಟಣದ ಜಿಪಿಜಿ ಪಪೂ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಪಾಠ ಪದ್ಯ ವ್ಯಾಕರಣಾಂಶಗಳಕಲಿಕೆಗೆ ಹೆಚ್ಚು ಆಸಕ್ತಿ ವಹಿಸಬೇಕು. ಪ್ರತಿನಿತ್ಯ ಗ್ರಂಥಾಲಯಕ್ಕೆ ಭೇಟಿ ನೀಡಿ ಇಂಗ್ಲಿಷ್ ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿರಿ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮರಿಯಮ್ಮನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಂಬೂನಾಥ್ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವ್ಯಾಕರಣವನ್ನು ಸುಲಭವಾಗಿಸಿಕೊಳ್ಳುವ ತಂತ್ರಗಳನ್ನು ನಿರರ್ಗಳವಾಗಿ ತಿಳಿಸಿದರು.ಪ್ರಶ್ನೆಪತ್ರಿಕೆ ವಿನ್ಯಾಸ ಅಂಕಗಳ ಹಂಚಿಕೆ ಕುರಿತು ಮಾಹಿತಿ ನೀಡಿದರು. ಸಂಚಾಲಕ ಕೆ. ದ್ಯಾಮಜ್ಜ, ಉಪನ್ಯಾಸಕರಾದ ಶಂಕರ್ ಬೆಟಗೇರಿ, ವಿರೂಪಾಕ್ಷಪ್ಪ ಬಡಿಗೇರ್, ಪ್ರದೀಪ್ ಜೋಶಿ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ಆಂಗ್ಲ ಉಪನ್ಯಾಸಕರಾದ ಪರಶುರಾಮ ನಾಗೋಜಿ, ಅಜರುದ್ದಿನ್ ಮೂಲಿಮನಿ, ವಿಶ್ವನಂದಿನಿ ಗೋಸಾವಿ ಕಾರ್ಯಕ್ರಮ ಸಂಯೋಜಿಸಿದ್ದರು.