ಬ್ಯಾಡ್ಗಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬ್ಯಾಡಗಿ 05: ಪ್ರಧಾನ ಮಂತ್ರಿ ಆದರ್ಶ ಗ್ರಾಮದ ಉದ್ದೇಶ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರು ಹೆಚ್ಚು ಇರುವ ಗ್ರಾಮಗಳ ಅಭಿವೃದ್ಧಿಗೊಳಿಸುವುದಾಗಿದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು. ತಾಲೂಕಿನ ಕುಮ್ಮೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಲ್ಲಿಕೊಪ್ಪ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 40ಲಕ್ಷ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದಲ್ಲಿ ಈಗಾಗಲೇ ವಿವಿಧ ಯೋಜನೆಗಳಲ್ಲಿ ಬಾಕಿ ಉಳಿದಿರುವ ಅಗತ್ಯ ಕಾಮಗಾರಿ ಗುರುತಿಸಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೊಳಿಸುವುದು ಆದರ್ಶ ಗ್ರಾಮದ ಪ್ರಮುಖ ಉದ್ದೇಶವಾಗಿದೆ ಎಂದರಲ್ಲದೇ, ಗ್ರಾಮದಲ್ಲಿ ಸರ್ಕಾರದಿಂದ 35/40 ವರ್ಷಗಳ ಹಿಂದೆ ಹಕ್ಕುಪತ್ರ ಪಡೆದು ಮನೆ ನಿರ್ಮಿಸಿಕೊಂಡವರಿಗೆ ಈ-ಸ್ವತ್ತು ಉತಾರ ಪಡೆಯಲು ಬಹಳಷ್ಟು ತೊಂದರೆ ಆಗಿರುವ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಿ ಅನುಮೋದಿತ ನಕ್ಷೆಯ ಸರ್ವೆಯೊಂದಿಗೆ ಈ-ಸ್ವತ್ತು ಉತಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್‌.ಟಿ. ಲಮಾಣಿ ಮಾತನಾಡಿ, ಆದರ್ಶ ಗ್ರಾಮ ಯೋಜನೆಯಡಿ ಕುಡಿಯುವ ನೀರು, ಗ್ರಾಮ ನೈರ್ಮಲ್ಯೀಕರಣ, ಕಸ ವಿಲೇವಾರಿ, ಅಂಗನವಾಡಿ, ಶಾಲೆಗಳಲ್ಲಿ ಶೌಚಾಲಯ ದುರಸ್ತಿ, ಸಿಸಿ ರಸ್ತೆ ನಿರ್ಮಾಣ, ಸೌರ ವಿದ್ಯುತ್ ಮತ್ತು ಬೀದಿ ದೀಪಗಳ ನಿರ್ಮಾಣ, ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿದೆ. ಲಭ್ಯವಿರುವ ಅನುದಾನದಲ್ಲಿ ಗ್ರಾಮದಲ್ಲಿ ಆಯ್ದ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಚನ್ನಬಸಪ್ಪಬಣಕಾರ, ಶಾಂತವ್ವ ಲಮಾಣಿ, ಆರಾಧನಾ ಸಮೀತಿ ಸದಸ್ಯ ಅರ್ಜುನಪ್ಪ ಲಮಾಣಿ, ಶಿವಯೋಗಿ ಉಕ್ಕುಂದ, ಮಂಜನಗೌಡ ಪಾಟೀಲ, ಪಿಡಿಓ ವಿಶ್ವನಾಥ ಕಟ್ಟಿಮನಿ, ನಿರ್ಮಿತಿ ಕೇಂದ್ರದ ಇಂಜನೀಯರ್ ಎಚ್‌.ಡಿ.ಶಾಂತಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ