ಹೂವಿನ ಹಡಗಲಿ

ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ

ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ

ಹೂವಿನಹಡಗಲಿ 08: ಎಲ್ಲಾ ನೊಂದಾಯಿತ ಮತದಾರರು ನೂತನ ಗುರುತಿನ ಚೀಟಿ ಇ-ಇPPIಅ ಡೌನ್‍ಲೋಡ್ ಮಾಡಿಕೊಳ್ಳಲು ಮಾಹಿತಿ ನೀಡುವುದು ಅವಶ್ಯವಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಚ್ ಚಂದ್ರಪ್ಪ ಹೇಳಿದರು. ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯ ಮತದಾರರ ಸಾಕ್ಷರತಾ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮತದಾರರ ಸಾಕ್ಷರತಾ ಸಂಘಗಳ ಮೂಲಕ ತಾಲೂಕಿನ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮುಖಾಂತರ ಪಾಲಕರು ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ ಎಂದರು. ತುಂಗಭದ್ರಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಕೆಎಸ್‍ಆರ್‍ಟಿಸಿ ಕಾಲೋನಿ, ತುಂಗಭದ್ರಾ ಬಡಾವಣೆ, ಸೋಗಿ ವೃತ್ತ, ರೇಣುಕಾ ನಗರದ ಮತದಾರರು ಹಾಗೂ ಸಾರ್ವಜನಿಕರಿಗೆ ಜನ ಜಾಗೃತಿ ಮೂಡಿಸಿದರು. ಶಿಕ್ಷಕ ಸುರೇಶ ಅಂಗಡಿ, ದ್ವಾರಕೀಶ್ ರೆಡ್ಡಿ, ಆನಂದ ಜಿ, ಪ್ರತಿಮಾ ಎನ್ ಇತರರು ಭಾಗವಹಿಸಿದ್ದರು.

ಸುದ್ದಿ ಓದಿ