ಬ್ಯಾಡ್ಗಿ

ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

ಬ್ಯಾಡಗಿ 16: ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಬೇಕಾದ ಪೌಷ್ಠಿಕ ಆಹಾರ, ಓಷಧಗಳನ್ನು ಒದಗಿಸುವ ಮೂಲಕ ಅವರನ್ನು ಆರೋಗ್ಯ ಸದೃಢರನ್ನಾಗಿಸಿ ಕೋವಿಡ್‌ನಿಂದ ರಕ್ಷಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಎಸ್‌’ಡಿಎಂಸಿ ಅಧ್ಯಕ್ಷ ಕೆಂಪೇಗೌಡ ಪಾಟೀಲ ಹೇಳಿದರು. ತಾಲೂಕಿನ ಕಳಗೊಂಡ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದೊಂದಿಗೆ ನಡೆದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.ಡಾ. ರೋಶನ್ ದೊಡ್ಡಮನಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ರಕ್ಷಣೆ ಮಾಡಲು ವಾತ್ಸಲ್ಯ ಯೋಜನೆಯಡಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಆಹಾರ ಕಿಟ್, ಪ್ರೋಟಿನ್ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಡಾ.ಮಂಜುನಾಥ, ಸಿಆರಿ​‍್ಪ ಎಸ್‌.ಆರಿ​‍್ಶಡೇನೂರ, ಮುಖ್ಯ ಶಿಕ್ಷಕ ಮಾರುತಿ ಚಿಕ್ಕನಗೌಡ್ರ, ಶಿಕ್ಷಕರಾದ ಪದ್ಮಾವತಿ ಕರ್ನೂಲ ಮತ್ತು ಮಹೇಶ, ಆಶಾ ಕಾರ್ಯಕರ್ತೆ ಸುಮಂಗಲಾ ಮಾಸಣಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ