ಬಳ್ಳಾರಿ

ಲಸಿಕಾ ಅಭಿಯಾನಕ್ಕೆ ಚಾಲನೆ

ಲಸಿಕಾ ಅಭಿಯಾನಕ್ಕೆ ಚಾಲನೆ

ಬಳ್ಳಾರಿ 05: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೋವಿಡ್ 19 ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. 

ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಮಲ್ಲಿಕಾರ್ಜುನ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ ಕೊರೊನಾ ಮಾಹಾಮಾರಿಯನ್ನು ತಡೆಗಟ್ಟಲು 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಲಸಿಕೆ ಪಡೆಯಿರಿ. ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಲಸಿಕೆ ಪಡೆದುಕೊಂಡು ಕೋವಿಡ್ ನಿಯಂತ್ರಿಸಲು ಸಹಕರಿಸಿ ಎಂದರು. 

ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ 150 ಕ್ಕೂ ಹೆಚ್ಚು ಜನ ಲಸಿಕೆ ಪಡೆದರು. 

ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಮತ್ತು ಇತರರು ಇದ್ದರು. 


ಸುದ್ದಿ ಓದಿ