ಬರಗಾಲ: ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ಕ್ರಮ ವಹಿಸಿ
Drought: Take precautionary measures to tackle the drinking water problem
ಲೋಕದರ್ಶನ ವರದಿ
ಬಳ್ಳಾರಿ 19: ರಾಜ್ಯದಲ್ಲಿ ತಲೆದೋರಿರುವ ಮಳೆ ಕೊರತೆ, ಬರಗಾಲದ ಭೀತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಡಿಸಿ ಮತ್ತು ಜಿಪಂ ಸಿಇಒ ಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು. ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿ ಉದ್ಭವಿಸಿರುವ ಕುರಿತು ಮುಖ್ಯಮಂತ್ರಿಗಳ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿ ಮತ್ತು ಜಿಪಂ ಸಿಇಒ ಗಳೊಂದಿಗೆ ವರ್ಚುವಲ್ ಮೂಲಕ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಶೇ. 60 ರಷ್ಟು ಮಳೆ ಕೊರತೆ: 75 ತಾಲೂಕುಗಳು ಬರ ಪೀಡಿತ: ರಾಜ್ಯದಲ್ಲಿ ಪ್ರಸ್ತುತ ಸುಮಾರು ಶೇ. 60 ರಷ್ಟು ಮಳೆ ಕೊರತೆ ಕಂಡುಬಂದಿದ್ದು, ಸಾಮಾನ್ಯ ಕೊರತೆಯ ಪ್ರಮಾಣವು ಶೇ.30 ರಿಂದ ಶೇ.59 ಕ್ಕೆ ಏರಿಕೆಯಾಗಿದೆ.ರಾಜ್ಯದ ಒಟ್ಟು 175 ತಾಲೂಕುಗಳ ಪೈಕಿ ಈಗಾಗಲೇ 152 ಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ವರದಿಯಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸುಮಾರು 75 ತಾಲೂಕುಗಳು ಬರಪೀಡಿತ ಎಂದು ಘೋಷಿಸಲು ಅರ್ಹತೆ ಪಡೆದಿದ್ದು, ಮುಂದಿನ ಹಂತವಾಗಿ ಜಂಟಿ ಪರೀಶೀಲನೆ ಹಾಗೂ ಮಣ್ಣಿನ ತೇವಾಂಶ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ.ಮುಂದಿನ 15 ದಿನಗಳ ಒಳಗಾಗಿ ಸಂಪೂರ್ಣ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುವ ಸಲುವಾಗಿ ಸವಿವರದೊಂದಿಗೆ ಅಧಿಕಾರಿಗಳು ವರದಿ ನೀಡಬೇಕು ಎಂದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 