ಶಿಗ್ಗಾವ್

ಸಿಎಂ ವಿಡಿಯೋ ಕಾನ್ಫರೆನ್ಸ್‌ ಮಾಡಿದರೆ ಬರ ನಿರ್ವಹಿಸಲು ಸಾಧ್ಯವಿಲ್ಲ: ಬೊಮ್ಮಾಯಿ

ಸಿಎಂ ವಿಡಿಯೋ ಕಾನ್ಫರೆನ್ಸ್‌ ಮಾಡಿದರೆ ಬರ ನಿರ್ವಹಿಸಲು ಸಾಧ್ಯವಿಲ್ಲ: ಬೊಮ್ಮಾಯಿ


ಶಿಗ್ಗಾವಿ 07: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದು, ಬರವನ್ನು ನಿರ್ಲಕ್ಷ್ಯ ಮಾಡಿದೆ. ಮುಖ್ಯಮಂತ್ರಿಗಳು ಕೇವಲ ನಾಮಕಾವಸ್ಥೆಗೆ ಒಂದೆರಡು ಕಡೆಗಳಲ್ಲಿ ಕುಳಿತುಕೊಂಡು ವಿಡಿಯೋ ಕಾನ್ಫರೆನ್ಸ್‌ ಮಾಡಿದರೆ ಬರವನ್ನ ನಿರ್ವಹಿಸಲು ಸಾಧ್ಯವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   

ತಾಲೂಕಿನ ಬಂಕಾಪೂರ ಪಟ್ಟಣದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ?ರಾಜ್ಯದಲ್ಲಿ ಕಳೆದ ಎರಡು ದಶಕಗಳಲ್ಲಿ ಅತ್ಯಂತ ತೀವ್ರವಾದ ಬರಗಾಲ ಆವರಿಸಿದ್ದು, ಹಸಿಬರ ಹಾಗೂ ಒಣಬರ ಎರಡೂ ಪರಿಸ್ಥಿತಿಗಳು ಎದುರಾಗಿವೆ. ಮುಂಗಾರು ಮಳೆಯನ್ನು ನಂಬಿ ಬಿತ್ತಿದ ಬೀಜ, ಗೊಬ್ಬರ ಎಲ್ಲವೂ ನಷ್ಟವಾಗಿದ್ದು, ಧನಕರುಗಳಿಗೆ ಮೇವಿನ ತೀವ್ರ ಕೊರತೆಯುಂಟಾಗಿದೆ.

ಅಕ್ಟೋಬರ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲೇ ಈ ಪರಿಸ್ಥಿತಿಯಿದ್ದರೆ, ಜನವರಿ-ಫೆಬ್ರವರಿಯಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗಲಿದೆ ಎಂದು ತಿಳಿಸಿದ್ದಾರೆ.  ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಲ್ಲೇ ಆದೇಶಗಳನ್ನು ನೀಡಬೇಕು ಎಂದು ಆಗ್ರಹಿಸಿದರು. 


ಸುದ್ದಿ ಓದಿ