ಸಂಡೂರಿನಲ್ಲಿ ಬರ ಪರಿಸ್ಥಿತಿ ಪರೀಶೀಲನೆ: ರೈತರಿಗೆ ಪರಿಹಾರಕ್ಕೆ ಸರ್ಕಾರ ಬದ್ಧ : ಸಚಿವ ಬಿ. ನಾಗೇಂದ್ರ
Drought situation assessment in Sandur: Government committed to providing relief to farmers – Minist
ಲೋಕದರ್ಶನ ವರದಿ
ಬಳ್ಳಾರಿ 07 : ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರೀಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಡೂರು ತಾಲೂಕಿನ ವಿಠಲಾಪುರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪರೀಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸೂಚನೆಯಂತೆ ಸರ್ಕಾರ ರೈತರ ನೆರವಿಗೆ ಬದ್ಧವಾಗಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಅಧಿಕಾರಿಗಳ ವರದಿ ಆಧರಿಸಿ ಶೀಘ್ರದಲ್ಲೇ ಪರಿಹಾರ ಘೋಷಣೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಂಡೂರು ತಾಲೂಕಿನಲ್ಲಿ ಅತಿಸಣ್ಣ ಹಾಗೂ ಸಣ್ಣ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಳೆಯ ಕೊರತೆಯಿಂದ ಬೆಳೆಗಳು ಹಾನಿಗೊಳಗಾಗಿವೆ. ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.
ಕೈಗಾರಿಕಾ ಮಾಲಿನ್ಯಕ್ಕೆ ಕಟ್ಟುನಿಟ್ಟಿನ ಕ್ರಮ
ಸಂಡೂರು ಪ್ರದೇಶದ ಕೈಗಾರಿಕೆಗಳಿಂದ ಉಂಟಾಗುತ್ತಿರುವ ಧೂಳು ಹಾಗೂ ಕಲುಷಿತ ನೀರಿನಿಂದ ಕೆರೆಗಳು, ಕೃಷಿ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೈಗಾರಿಕೆಗಳಲ್ಲಿ ವೈಜ್ಞಾನಿಕ ಶೋಧಕ (ಫಿಲ್ಟರ್) ವ್ಯವಸ್ಥೆ ಅಳವಡಿಸುವಂತೆ ಸೂಚಿಸಲಾಗುವುದು ಎಂದು ಸಚಿವರು ಹೇಳಿದರು.
ಕುರೇಕುಪ್ಪ ಹಾಗೂ ದರೋಜಿ ಭಾಗಗಳಲ್ಲಿ ತ್ಯಾಜ್ಯ ನೀರಿನ ಸಮಸ್ಯೆ ನಿವಾರಣೆಗೆ ಎಸ್ಟಿಪಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನೀರಾವರಿ ಮತ್ತು ಜಾನುವಾರುಗಳ ಮೇವು ತುಂಗಭದ್ರ ಜಲಾಶಯದಲ್ಲಿ ನೀರಿನ ಮಟ್ಟ 80 ಟಿಎಂಸಿ ತಲುಪಿದ ಬಳಿಕ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಪರೀಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ಮಹಮ್ಮದ್ ಹಾರಿಸ್ ಸುಮೇರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 