ಡ್ರಗ್ ಅವೇರ್‌ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ಬೆಳಗಾವಿ : ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ನಿಗ್ರಹ ದಿನದ ಅಂಗವಾಗಿ ಜೂನ್ 21ರಿಂದ 28ರವರೆಗೆ "ಡ್ರಗ್ ಅವೇರ್‌ನೆಸ್ ವೀಕ್" ಆಚರಿಸಿದ ಉತ್ತರ ವಲಯ ಪೊಲೀಸ್ ಇಲಾಖೆ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳ ಮೂಲಕ ಕಾರ್ಯಾಚರಣೆಯ ಭಾಗವಾಗಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಒಟ್ಟು 16 ಪ್ರಕರಣಗಳನ್ನು ದಾಖಲಿಸಿ, ಅಂದಾಜು 12,38,788 ಮೌಲ್ಯದ 26 ಕೆಜಿ 987 ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಮಾದಕ ವಸ್ತುಗಳ ಸಂಗ್ರಹಣೆ, ಮಾರಾಟ ಮತ್ತು ಸಾಗಾಟದಲ್ಲಿ ರೂಢಿಗತ ಆರೋಪಿಗಳ ವಿರುದ್ಧ ಮೊದಲ ಬಾರಿಗೆ PIಖಿಓಆPS ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಸಂಬAಧ ಗದಗ ಜಿಲ್ಲೆಯ ಬೆಟಗೇರಿಯ ನಾಗರಾಜ ದೊಡ್ಡಪ್ಪ ಮುತ್ತಗಾರ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸೋಲಾಪೂರದ ದೀಪಕ ರಾವಸಾಹೇಬ ನಾಯಿಕ, ವಿಜಯಪುರ ಜಿಲ್ಲೆಯ ಆಲಮೇಲದ ಪ್ರಭು ಅಲಿಯಾಸ್ ಪ್ರಭಾಕರ ಬಾಬು ಲಾವಟೆ ಹಾಗೂ ವಿಜಯಪುರದ ಮನೋಹರ ಅಲಿಯಾಸ್ ಮೋಹನ ಯಲ್ಲಪ್ಪ ಚವ್ಹಾಣ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ
ಇದರ ಜೊತೆಗೆ, ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಈ ಹಿಂದೆ ವಶಪಡಿಸಿಕೊಂಡಿದ್ದ 427 ಕೆಜಿ 29 ಗ್ರಾಂ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದ್ದು, ಅವುಗಳ ಒಟ್ಟು ಮೌಲ್ಯ 1,12,49,510 ಆಗಿದೆ.
ಜಾಗೃತಿ ಅಭಿಯಾನದ ಅಂಗವಾಗಿ ಉತ್ತರ ವಲಯದ ಐದು ಜಿಲ್ಲೆಗಳ ಶಾಲೆ ಹಾಗೂ ಕಾಲೇಜುಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು 1,106 ಜಾಗೃತಿ ಕಾರ್ಯಕ್ರಮಗಳು ಮತ್ತು 107 ವಿಶೇಷ ಅಭಿಯಾನಗಳು ನಡೆಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಮಾದಕ ವ್ಯಸನದ ವಿರುದ್ಧ ಅರಿವು ಮೂಡಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.